ಶೇಣಿ ಶಾಲೆಯಲ್ಲಿ ಸ್ಪರ್ಧಾ ವಿಜೇತರಿಗೆ ಅಭಿನಂದನೆ

12-winner
Published on

ಪೆರ್ಲ: ರಾಜ್ಯಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಶೇಣಿ ಶ್ರೀಶಾರದಾಂಬ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅಭಿನವ್ ಹಾಗೂ ಜಿಲ್ಲಾಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡಾ ಮೇಳದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಇತ್ತೀಚೆಗೆ ಅಭಿನಂದಿಸಲಾಯಿತು.

ಕಾಸರಗೋಡು ಜಿಲ್ಲಾ ಜೂನಿಯರ್ ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿದ ಅನುದೀಪ್ ಎಸ್.ಆರ್, ಅನಿರುದ್ಧ್ ಎಸ್, ಶಶಾಂಕ್ ಪಿ, ಸಬ್ ಜೂನಿಯರ್ ಕಬಡ್ಡಿಪಟುಗಳಾದ ಭರತ್, ತೇಜಸ್ ಕೆ, ಪವನ್ ಬಿ, ದಿವಾಕರ ಜೆ.ಪಿ, ಶ್ರೇಯಸ್ ರೈ ಹಾಗೂ ಶಾಲಾ ದೈಹಿಕ ಶಿಕ್ಷಕ ಸೃಜನ್ ರೈ, ತರಬೇತುದಾರ ವಂದಿತ್ ಶೆಟ್ಟಿ ಬಂಬ್ರಾಣ ಅವರನ್ನು ಅಭಿನಂದಿಸಲಾಯಿತು.

ಎಣ್ಮಕಜೆ ಗ್ರಾ.ಪಂ. ಅಧ್ಯಕ್ಷ ಸೋಮಶೇಖರ್ ಜೆ.ಎಸ್, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ, ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲ ಶಾಸ್ತಾ ಕುಮಾರ್, ಶಾಲಾ ಆಡಳಿತ ಮಂಡಳಿಯ ಶಾರದಾ ವೈ, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಹೈಮಾವತಿ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಶ್ರೀಶ ಕುಮಾರ್ ಎಂ.ಪಿ ಸ್ವಾಗತಿಸಿದರು. ಶಿಕ್ಷಕಿ ದಿವ್ಯಾ ಆಳ್ವ ವಂದಿಸಿದರು. ಬಳಿಕ ಬ್ಯಾಂಡ್ ವಾದ್ಯಗಳೊಂದಿಗೆ ಶಾಲೆಯಿಂದ ಹೊರಟು ಪೇಟೆಯಲ್ಲಿ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net