

ಮೂಡುಬಿದಿರೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಮೂಡುಬಿದಿರೆಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಯುಕ್ತಾಶ್ರಯದಲ್ಲಿ ಡಿಸಿಎಂ ಕೋರ್ಸ್ 69ನೇ ತಂಡದ ರ‌್ಯಾಂಕ್ ವಿಜೇತರಿಗೆ ಸನ್ಮಾನ ಸಮಾರಂಭ ಲಾಡಿ ಕೆಐಸಿಎಂನ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಇನ್ನರ್‌ವ್ಹೀಲ್ ಕ್ಲಬ್ ಮಾಜಿ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಧನೆ ಮಾಡಲು ಮತ್ತು ಹೆಚ್ಚು ಬೆಳೆಯಲು ಅವಕಾಶವಿರುವ ಕ್ಷೇತ್ರವಿರುವುದು ಸಹಕಾರಿ ಕ್ಷೇತ್ರದಲ್ಲಿ. ಸಹಕಾರಿ ಕ್ಷೇತ್ರದಲ್ಲಿ ತರಬೇತಿ ಪಡೆದವರಿಗೆ ಉದ್ಯೋಗದ ಅವಕಾಶ ನೀಡುವ ಬಗ್ಗೆ ಮನವಿ ಮಾಡಲಾಗುವುದು ಎಂದರು.
ಮುಖ್ಯ ಅತಿಥಿಯಾಗಿದ್ದ ಎಂಸಿಎಸ್ ಸೊಸೈಟಿಯ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಶುಭಹಾರೈಸಿದರು. ಆಳ್ವಾಸ್ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ ಉಪಸ್ಥಿತರಿದ್ದರು. ಪ್ರಾಂಶುಪಾಲ ವಿಶ್ವೇಶ್ವರಯ್ಯ ಸ್ವಾಗತಿಸಿದರು. ಉಪನ್ಯಾಸಕಿ ಬಿಂದು ವಂದಿಸಿದರು. ಉಪನ್ಯಾಸಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು.
ಪ್ರಥಮ ರ‌್ಯಾಂಕ್ ಪಡೆದ ಚೇತನಾ ಬಿ.ಎಸ್(1ನೇ ರ‌್ಯಾಂಕ್), ದೀಕ್ಷಾ(2ನೇ ರ‌್ಯಾಂಕ್), ಸ್ವಾತಿ (5ನೇ ರ‌್ಯಾಂಕ್), ಬಿಂದ್ಯಶ್ರೀ(6ನೇ ರ‌್ಯಾಂಕ್), ಧನ್ಯಾ ಮತ್ತು ಸುಮನಾ (8ನೇ ರ‌್ಯಾಂಕ್)ಅವರನ್ನು ಸನ್ಮಾನಿಸಲಾಯಿತು.