ಗೆಲುವು ಸಾಧಿಸಲು ಸಹಕರಿಸಿದ ಸದಸ್ಯರಿಗೆ ಅಭಿನಂದನೆ

10 KRN-2
ಕೆ.ಆರ್.ನಗರ ತಾಲೂಕು ಪಿಎಲ್‌ಡಿ ಬ್ಯಾಂಕಿಗೆ ಕಾಂಗ್ರೆಸ್ ಬೆಂಬಲಿತರಾಗಿ ಆಯ್ಕೆಯಾದ ನಿರ್ದೇಶಕರನ್ನು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಅಭಿನಂದಿಸಿದರು.
Published on

ಕೆ.ಆರ್.ನಗರ: ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಬೆಂಬಲ ನೀಡಿದ ಬ್ಯಾಂಕ್ ರೈತ ಸದಸ್ಯ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.

ಪಟ್ಟಣದ ಮುಳ್ಳೂರು ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಿಎಲ್‌ಡಿ ಬ್ಯಾಂಕ್‌ಗೆ ಪಕ್ಷದ ಬೆಂಬಲಿತರಾಗಿ ನೂತನವಾಗಿ ನಿರ್ದೇಶಕರಾಗಿ ಆಯ್ಕೆಯಾದವರನ್ನು ಅಭಿನಂದಿಸಿ ಮಾತನಾಡಿದ ಅವರು, ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಪಕ್ಷ ಗೆಲುವಿನ ಅಭಿಯಾನ ಮುಂದುವರಿಸಲಿದೆ ಎಂದು ತಿಳಿಸಿದರು.

ಈ ಗೆಲುವು ನಮಗೆ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಿಗೆ ಗೆಲುವಿನ ಸೋಪಾನವಾಗಲಿದ್ದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದಲೇ ಸಂಘಟಿತರಾಗಿ ಕೆಲಸ ಮಾಡಿ ಕ್ಷೇತ್ರದ ವ್ಯಾಪ್ತಿಯ ಎಲ್ಲ ಸ್ಥಾನಗಳಲ್ಲಿಯೂ ಜಯಗಳಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿರ್ದೇಶಕರಾಗಿ ಆಯ್ಕೆಯಾಗಿರುವವರು ಪ್ರಾಮಾಣಿಕವಾಗಿ ಕೆಲಸ ಮಾಡಿ ಬ್ಯಾಂಕಿಗೆ ಬರುವ ರೈತ ಸದಸ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಸರ್ಕಾರದಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಕಿವಿ ಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net