ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

Shirva Sanmana
Shirva Sanmana
Published on

ಶಿರ್ವ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳನ್ನು ಶಿರ್ವದ ಹಿಂದು ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಅಭಿನಂದಿಸಲಾಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಉತ್ತಮ ಅಂಕ ಗಳಿಸಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾವರ್ಧಕ ಸಂದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸನ್ಮಾನಗೊಂಡಿರುವ ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿ ಕನ್ನಡ ವಾಧ್ಯಮದಲ್ಲಿ ಓದಿ ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಗಳಿಸಿದ್ದಾರೆ. ಪರಿಶ್ರಮಕ್ಕೆ ಫಲ ಬರುತ್ತದೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದರು.

ಪ್ರಾಂಶುಪಾಲೆ ನೀಶಾ ಶೆಟ್ಟಿ, ಜ್ಞಾನಚೇತನಾ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಅಕಾಡೆಮಿಕ್ ಡೀನ್ ಗುರುಪ್ರಸಾದ್, ಭೌತಶಾಸ್ತ್ರ ಹಿರಿಯ ಉಪನ್ಯಾಸಕ ಮಂಗೇಶ್ ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಪಪೂ ಕಾಲೇಜಿನ ಪ್ರಾಂಶುಪಾಲ ಸುಂದರ ಮೇರಾ ಸ್ವಾಗತಿಸಿದರು. ಉಪನ್ಯಾಸಕಿ ನಿಶಿತಾ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಅನಿತಾ ಉಪಾಧ್ಯಾಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net