ಪಡುಕುಡೂರು ಶಾಲೆಯಲ್ಲಿ ಕ್ರೀಡಾಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

hbr
Published on

ಹೆಬ್ರಿ: ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಪಾಲಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆಯಲ್ಲಿ ಕ್ರೀಡಾಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಶಾಲಾಭಿವೃದ್ಧಿ ಮತ್ತು ಶಾಲಾ ಶತಮಾನೋತ್ಸವದ ಬಗ್ಗೆ ಚರ್ಚಿಸಲಾಯಿತು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯಶಿಕ್ಷಕ ಹರೀಶ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಪ್ರಶಸ್ತಿಯ ಮೊತ್ತವನ್ನು ಹರೀಶ ಪೂಜಾರಿ ಅವರು ಶಾಲೆಗೆ ದೇಣಿಗೆ ನೀಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಸದಸ್ಯರು, ಪಡುಕುಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ ಹೆಗ್ಡೆ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಜಯಲೀಲಾ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಭಾರವಿ ಶೆಟ್ಟಿ, ಧರ್ಮಸ್ಥಳ ಯೋಜನೆಯ ಸೇವಾ ಪ್ರತಿನಿಧಿ ಚಿತ್ರಾ, ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪಾಲಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರುತಿ ಸ್ವಾಗತಿಸಿದರು. ಶೋಭಾ ವಂದಿಸಿದರು. ಸುದರ್ಶನ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net