

ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಹತ್ತನೇ ತರಗತಿಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನವನ್ನು ಗಳಿಸಿದ ನಿಹಾಲ್ ಎಚ್.ಶೆಟ್ಟಿ ಅವರನ್ನು ಪಾಲಕರೊಂದಿಗೆ ಸನ್ಮಾನಿಸಲಾಯಿತು.
ಸಂಚಾಲಕರಾದ ಸುಬ್ರಹ್ಮಣ್ಯ ಭಟ್, ನಿವೃತ್ತ ಪ್ರಾಂಶುಪಾಲ ಡಾ.ಟಿ.ಕೃಷ್ಣಮೂರ್ತಿ ಶುಭಹಾರೈಸಿದರು. ವಿಶಿಷ್ಟ ಶ್ರೇಣಿ ಹಾಗೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಹರೀಶ್ ಶೆಟ್ಟಿ ಅಭಿಪ್ರಾಯ ಹಂಚಿಕೊಂಡರು. ಮುಖ್ಯ ಶಿಕ್ಷಕಿ ವೀಣಾ ಆರ್.ಪ್ರಸಾದ್ ಸ್ವಾಗತಿಸಿದರು. ಇಂದ್ರಪ್ರಸ್ಥ ವಿದ್ಯಾಸಂಸ್ಥೆ ಅಧ್ಯಕ್ಷ ಕರುಣಾಕರ ಸುವರ್ಣ ಮೊದಲಾದವರಿದ್ದರು.