ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳಿಗೆ ಅಭಿನಂದನೆ

5-KGL-1,,,,, ,,,)
ಕೊಳ್ಳೇಗಾಲದ ಸಂತ ಫ್ರಾನ್ಸಿಸ್ ಅಸ್ಸಿಸಿ ಸಭಾಂಗಣದಲ್ಲಿ ಶುಕ್ರವಾರ ಕ್ಯಾಥೊಲಿಕ್ ಅಸೋಸಿಯೇಷನ್ ಆಫ್ ಚಾಮರಾಜನಗರ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
Published on

ಕೊಳ್ಳೇಗಾಲ: ಪಟ್ಟಣದ ಸಂತ ಫ್ರಾನ್ಸಿಸ್ ಅಸ್ಸಿಸಿ ಸಭಾಂಗಣದಲ್ಲಿ ಶುಕ್ರವಾರ ಕ್ಯಾಥೊಲಿಕ್ ಅಸೋಸಿಯೇಷನ್ ಆಫ್ ಚಾಮರಾಜನಗರ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಕೊಳ್ಳೇಗಾಲ ವಲಯ ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚ್ ಫಾದರ್ ಎಂ.ರಾಯಪ್ಪ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಹಾಗೂ ಮೈಸೂರು ರಾಜೇಂದ್ರ ನಗರ ಶ್ರೀ ಛಾಯದೇವಿ ಕಾಲೇಜ್ ಆಫ್ ಎಜುಕೇಷನ್ ಪ್ರಾಂಶುಪಾಲ ಪ್ರೊ.ಡಾ. ಸಿ.ಅಂತೋಣಿ ಪೌಲ್ ರಾಜ್ ಮಾತನಾಡಿ, ಕ್ಯಾಥೊಲಿಕ್ ಅಸೋಸಿಯೇಷನ್ ಆಫ್ ಚಾಮರಾಜನಗರ ಒಳ್ಳೇಯ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಬೆನ್ನು ತಟ್ಟಿ ಮುಂದಿನ ಶಿಕ್ಷಣ ಉಜ್ವಲವಾಗಲಿ ಎಂದು ಹಾರೈಸಿದೆ. ಇಂತಹ ಕಾರ್ಯಕ್ರಮ ನಡೆಯಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಘದ ವತಿಯಿಂದ ಹೆಚ್ಚಿನ ನೆರವು ಸಿಗಬೇಕೆಂದರು.

ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಜಿಲ್ಲೆಯ ಕ್ಯಾಥೊಲಿಕ್ ಕ್ರೈಸ್ತ ವಿದ್ಯಾರ್ಥಿಗಳಿಗೆ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಮಾರ್ಟಳ್ಳಿ ಸಂತ ಲೂರ್ಧು ಮಾತೆ ಚರ್ಚ್ ಫಾದರ್ ಎಂ.ವಿನ್ಸೆಂಟ್, ಚಾಮರಾಜನಗರ ಸಂತಪೌಲರ ಚರ್ಚ್ ಫಾದರ್ ಸಿ.ಅಂತೋಣಪ್ಪ, ಜಿಲ್ಲಾ ಕ್ಯಾಥೊಲಿಕ್ ಅಸೋಸಿಯೇಷನ್ ಅಧ್ಯಕ್ಷ ಡಿ.ಜಿಡೇವಿಡ್, ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಅಲ್ವಿನ್ ಡಿಸೋಜ, ಮೈಸೂರಿನ ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಸಂಸ್ಥೆಗಳ ಒಕ್ಕೂಟ ಅಧ್ಯಕ್ಷ ಗ್ರೇಷಿಯನ್ ರಾಡ್ರಿಗಸ್, ಚಾಮರಾಜನಗರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ.ಎಂ. ಪ್ರಕಾಶ್, ಬೆಂಗಳೂರು ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ನಿರ್ದೇಶಕ ಕೆ.ಸಿ.ಸಂದೀಪ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೋಸೆಫ್ ಅಲೆಕ್ಸಾಂಡರ್, ಖಂಜಾಚಿ ಜಿ.ಅಭಿಲಾಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತ್ ಸದಸ್ಯ ಕ್ರಿಸ್ಟೋಫರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net