ವಿದ್ಯಾರ್ಥಿಗಳಿಗೆ ಅಭಿನಂದನೆ

abhinandane-1
ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು
Published on

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಕಿದಿಯೂರು ಸಹಯೋಗದೊಂದಿಗೆ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉದ್ದಜಿಗಿತದಲ್ಲಿ ನಿಧಿಶ್ರೀ, 600 ಮೀಟರ್ ಓಟದಲ್ಲಿ ಪ್ರಣಾಮ್ ಮತ್ತು 4*100 ಮೀಟರ್ ರಿಲೇಯಲ್ಲಿ ಮನಿಷಾ, ನಿಧಿಶ್ರೀ, ಶ್ರಾವ್ಯ ಹಾಗೂ ಪೃಥ್ವಿ ಆಚಾರ್ಯ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 4*100 ಮೀಟರ್ ರಿಲೇಯಲ್ಲಿ ಪ್ರೀತಮ್, ಪ್ರಣಾಮ್, ಅದ್ವಿತ್ ಹಾಗೂ ಪ್ರಣಯ್ ತೃತೀಯ ಸ್ಥಾನ ಪಡೆದುಕೊಂಡರೆ, 600 ಮೀಟರ್ ಓಟದಲ್ಲಿ ಮನಿಷಾ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ತರಬೇತಿ ನೀಡಿದ್ದರು. ಸಾಧನೆಗೈದ ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕಿ ಲೀನಾ ಕಾರ್ಡಿನ್, ತಂಡದ ವ್ಯವಸ್ಥಾಪಕ ದಿನಕರ ದೇವಾಡಿಗ, ಕುಸುಮ, ಎಸ್‌ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್, ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net