ಉಸ್ತುವಾರಿ ಸಚಿವ ಸಂತೋಷ ಲಾಡ ಭರವಸೆ; ನೌಕರರ ಬೇಡಿಕೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

21 Dwd 3
Published on

ಧಾರವಾಡ: ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಶಕ್ತಿ, ಗೃಹ ಲಕ್ಷ್ಮೀ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರ ನೀಡಿ ಶ್ರಮಿಸಿದ ಸರ್ಕಾರಿ ನೌಕರರಿಗೆ ಸರ್ಕಾರದ ಪರವಾಗಿ ಧನ್ಯವಾದಗಳು. ಆಡಳಿತ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸರ್ಕಾರಿ ನೌಕರರ ಸಹಕಾರ ಅಗತ್ಯ. ನೌಕರರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು.
ನಗರದ ರಪಾಟಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಸರ್ಕಾರಿ ನೌಕರ ಸಂಘ ಹಾಗೂ ಜಿಲ್ಲಾ ಘಟಕ ಮತ್ತು ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ನೂತನ ಶಾಸಕರ ಮತ್ತು ಸಚಿವರ ಅಭಿನಂದನಾ ಸಮಾರಂಭ ಹಾಗೂ ೨೦೨೨- ೨೩ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಸದಸ್ಯರ ಸಾಮಾನ್ಯಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ದೇಶಕ್ಕೆ ಮಾದರಿಯಾಗುವಂಥ ಯೋಜನೆಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆ ಜಾರಿಯಾಗಿದ್ದರಿಂದ ಕೋಟ್ಯಂತರ ಜನ ಉಚಿತ ಪ್ರಯಾಣಿಸಿದ್ದಾರೆ. ಇಂತಹ ಸಾಧನೆಗೆ ಸರ್ವರ ಸಹಕಾರ ಮುಖ್ಯ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಮಾಹಿತಿ ಹಕ್ಕು ಅಽನಿಯಮ ಮತ್ತು ಸಿಸಿಎ ನಿಯಮ, ಕೆಸಿಎಸ್ ನಿಯಮ ಸರ್ಕಾರಿ ನೌಕರನ ಕೈ-ಕಾಲುಗಳಿದ್ದಂತೆ. ತಿಳಿವಳಿಕೆ ಇದ್ದರೆ ಮಾತ್ರ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಸಾಧ್ಯ ಎಂದರು.
ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಸಂಘವು ಸರ್ಕಾರಿ ನೌಕರರ ಹಿತ ಕಾಯಲು ಅನೇಕ ಜನಪರ ಕಾರ್ಯಗಳನ್ನು ಮಾಡಿದೆ. ಸರ್ಕಾರದೊಂದಿಗೆ ಸಂಘರ್ಷ ಮಾಡುವ ಪ್ರಶ್ನೆ ಇಲ್ಲ. ಸರ್ಕಾರವು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸಹನೆಯಿಂದ ಪರಿಶೀಲಿಸಿ ಈಡೇರಿಸಬೇಕು ಎಂದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಹಿತಿ ಆಯೋಗದ ಮಾಜಿ ಮಾಹಿತಿ ಆಯುಕ್ತ ಡಾ. ಶೇಖರ ಸಜ್ಜನರ, ಮಲ್ಲಿಕಾರ್ಜುನ ಬಳ್ಳಾರಿ, ಎಂ.ವಿ. ರುದ್ರಪ್ಪ, ಎಸ್. ಬಸವರಾಜು, ದೇವಿದಾಸ ಶಾಂತಿಕರ, ಮಲ್ಲಿಕಾರ್ಜುನ ಸೊಲಗಿ, ರಾಜಶೇಖರ ಬಾಣದ, ಗಿರೀಶ ಚೌಡಕಿ, ಎ.ಬಿ. ಕೊಪ್ಪದ, ವಿ.ಎಫ್. ಚುಳಕಿ, ಡಾ. ಪ್ರಲ್ಹಾದ ಗೆಜ್ಜಿ, ಆರ್.ಎಂ. ಹೊಲ್ತಿಕೋಟಿ, ಇತರರಿದ್ದರು.
ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮಂಜುನಾಥ ಯಡಹಳ್ಳಿ ಸ್ವಾಗತಿಸಿದರು.
ಕಾರ್ಯಕ್ರಮಕ್ಕೂ ಮೊದಲು ನಡೆದ ಮಾಹಿತಿ ಹಕ್ಕು ಕಾರ್ಯಾಗಾರ ಮತ್ತು ಸಿಸಿಎ ನಿಯಮಾವಳಿಗಳ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಾಹಿತಿ ಆಯೋಗದ ಮಾಜಿ ಆಯುಕ್ತ ಡಾ. ಶೇಖರ ಸಜ್ಜನರ ಉಪನ್ಯಾಸ ನೀಡಿದರು. ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಬಿ. ನಾಗೇಂದ್ರ ಕುಮಾರ, ಇತರರಿದ್ದರು. ಎಫ್.ವಿ. ಮಂಜನ್ನವರ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net