

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಡಿ.15ರಂದು ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲು ಜೆಡಿಎಸ್ ತಯಾರಿ ನಡೆಸಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಂದು ಅದ್ದೂರಿ ಕಾರ್ಯಕ್ರಮ ಮಾಡಲು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು. ಪುಟ್ಟರಾಜು ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಸಮಾರಂಭ ಏರ್ಪಡಿಸಲಾಗುವುದು. ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಲಾಗುವುದು. ಅಲ್ಲದೆ, ಕೇಂದ್ರ ಸರ್ಕಾರದ ವಿವಿಧ ಯೋಜನೆ ಜಾರಿಗೊಳಿಸುವ ಬಗ್ಗೆ ತಿಳಿಸಲಾಗುವುದು. ಸಮಾರಂಭಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಿಂದ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಅದೇ ರಾತ್ರಿ 12ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರಿಂದ ಬೃಹತ್ ಕೇಕ್ ಕತ್ತರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಕೆ.ಸುರೇಶ್‌ಗೌಡ, ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ನಗರಸಭೆ ಅಧ್ಯಕ್ಷ ನಾಗೇಶ್, ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಇತರರಿದ್ದರು.
ಸಭೆಯ ನಂತರ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾಧ್ಯಕ್ಷ ಡಿ.ರಮೇಶ್, ರಘುನಂದನ್ ಸೇರಿದಂತೆ ಮತ್ತಿತರರು ಸರ್‌ಎಂವಿ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ನಡೆಸಿದರು.