ಸಾಧಕರನ್ನು ಗೌರವಿಸಿದರೆ ಕೆಲಸ ಮಾಡಲು ಪ್ರೇರಣೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಹೇಳಿಕೆ

Congratulatory ceremony mandya
Published on

ಮಂಡ್ಯ: ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಅವರಿಗೆ ಇನ್ನಷ್ಟು ಸಮಾಜಮುಖಿಯಾಗಿ ಕೆಲಸ ಮಾಡಲು ಪ್ರೇರಣೆ ಸಿಕ್ಕಂತಾಗುತ್ತದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ಅಭಿಪ್ರಾಯಪಟ್ಟರು.

ನಗರದ ಜೆ.ಪಿ ಸ್ಮಾರಕ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಜರ್ನಲಿಸ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮತ್ತು ಸಾಧಕರನ್ನು ಅಭಿನಂದಿಸಿ ಮಾತನಾಡಿದ ಅವರು, ಪತ್ರಕರ್ತರ ಸಮಾಜದ ಹಿತ ಕಾಯುವುದಲ್ಲದೆ, ಸಾಧಕರನ್ನು ಗುರುತಿಸಿ ಅಭಿನಂದಿಸುವಂತಹ ಉತ್ತಮ ಕೆಲಸವನ್ನು ಮಾಡುತ್ತಿರುವ ಶ್ಲಾಘನೀಯ. ಪತ್ರಕರ್ತರ ಕೆಲಸ ತುಂಬಾ ಜವಾಬ್ದಾರಿಯುತವಾಗಿದೆ. ಸಮಾಜದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ತರವಾಗಿದೆ. ಸರ್ಕಾರದ ತಪ್ಪು ಒಪ್ಪುಗಳನ್ನು ಗಮನಿಸುತ್ತಾ ಎಚ್ಚರಿಕೆ ನೀಡುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಾ ಆರೋಗ್ಯಕರ ಸಮಾಜ ಕಾಪಾಡುವಲ್ಲಿ ಶ್ರಮಿಸುತ್ತಾರೆ ಎಂದು ತಿಳಿಸಿದರು.

ಪತ್ರಕರ್ತ ಕೌಡ್ಲೆ ಚನ್ನಪ್ಪ ಮಾತನಾಡಿ, ಮುದ್ರಣ ಮಾಧ್ಯಮ ಜನರ ಹಿತಕ್ಕಾಗಿ, ಸಮಸ್ಯೆಗಳನ್ನು ಬಗೆಹರಿಸಲು, ಸಾಮಾಜಿಕ ನ್ಯಾಯ ದೊರಕಿಸಲು, ಪ್ರಭುತ್ವವನ್ನು ಎಚ್ಚರಿಸಿ, ಪ್ರಾಮಾಣಿಕ ಲೇಖನಗಳ ಮೂಲಕ ಸಮಾಜದ ಹಿತಕಾಯುವ ಕಾರ್ಯ ನಿರ್ವಹಿಸಬೇಕಿದೆ ಎಂದರು.

ಕ್ಲಬ್‌ನ ಅಧ್ಯಕ್ಷ ಎ.ಎಲ್.ಬಸವೇಗೌಡ, ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಪತ್ರಿಕಾ ವಿತರಕ ಅಣ್ಣೂರು ಲಕ್ಷ್ಮಣ್, ನಿವೃತ್ತ ಪ್ರಾಂಶುಪಾಲ ತೂಬಿನಕೆರೆ ಲಿಂಗರಾಜು, ಕಲಾವಿದ ಎಂ.ಎಲ್.ಸೋಮವರದ, ವಿಕಸನ ಸಂಸ್ಥೆ ನಿರ್ದೇಶಕ ಮಹೇಶ್‌ಚಂದ್ರಗುರು, ದಸಂಸ ಮುಖಂಡ ವೆಂಕಟಗಿರಿಯಯ್ಯ ಇತರರಿದ್ದರು. ಇದೇ ವೇಳೆ ಮಿಮ್ಸ್‌ನ ನಿವೃತ್ತ ಪಿಆರ್‌ಒ ಚ.ಮ.ಉಮೇಶ್ ಹಾಗೂ ಸಾಮಾಜಿಕ ಕಾರ್ಯಕರ್ತ ಥಾಮಸ್ ಬೆಂಜಮಿನ್ ಅವರನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net