

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಅಭಿಮಾನಿ ಬಳಗದ ವತಿಯಿಂದ ಮೇ 22ರಂದು ಬೆಳಗ್ಗೆ 11 ಗಂಟೆಗೆ ಆಲೂರ ವೆಂಕಟರಾವ್ ಭವನದಲ್ಲಿ ದೀಪಕ ಚಿಂಚೋರೆ ಜನ್ಮದಿನ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ನಾಗರಾಜ ಗುರಿಕಾರ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸ್ಕಾಂ ಅಧ್ಯಕ್ಷ ಸಯ್ಯದ ಅಜೀಮಪೀರ ಖಾದ್ರಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್. ಎಚ್. ಕೋನರಡ್ಡಿ, ನಿಗಮ ಮಂಡಳಿ ಅಧ್ಯಕ್ಷರು, ಪಾಲಿಕೆ ಸದಸ್ಯರು, ಇತರರು ಪಾಲ್ಗೊಳ್ಳುವರು. ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಅಧ್ಯಕ್ಷತೆ ವಹಿಸುವರು ಎಂದರು.
ಎಲ್ಲ ವರ್ಗದ ಜನರ ಏಳಿಗೆಗೆ ಚಿಂಚೋರೆ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 38 ಸಾಧಕರಿಗೆ ಸನ್ಮಾನಿಸಲಾಗುವುದು. ದೀಪಕ ಚಿಂಚೋರೆ ಹು-ಧಾ ಮಹಾನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿ, ನೂರಾರು ಕುಟುಂಬಗಳಿಗೆ ಆಟೋರಿಕ್ಷಾ, ಹೊಲಿಗೆ ಯಂತ್ರಗಳನ್ನು ನೀಡಿದ್ದಾರೆ. ಅನೀಶ ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಿ ಸಾವಿರಾರು ಜನರಿಗೆ ಆರ್ಥಿಕ ಚೈತನ್ಯ ತುಂಬಿದ್ದಾರೆ ಎಂದರು.
ದೀಪಕ ಚಿಂಚೋರೆ ಅಭಿಮಾನಿ ಬಳಗದ ಅಧ್ಯಕ್ಷ ಮಹಬೂಬ ಪಠಾಣ, ಆನಂದ ಮುಶಣ್ಣವರ, ಗುರುಬಸಪ್ಪ ಕೋಟೂರ, ಆನಂದ ಚೌವ್ಹಾಣ, ಇತರರು ಇದ್ದರು.