

ಬಂಟ್ವಾಳ: ಬಿಜೆಪಿಯನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಸಲು ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಬಿ.ಸಿ.ರೋಡಿನಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ, ಸಂಸದ ಬೃಜೇಶ್ ಚೌಟ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ಬಲಿಷ್ಠವಾಗಿದೆ ಎಂದರು. ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿದರು. ಕ್ಯಾ.ಬ್ರಿಜೇಶ್ ಚೌಟ ಹಾಗೂ ಎಲ್.ಭೋಜೇಗೌಡ ಅವರನ್ನು ಅಭಿನಂದಿಸಲಾಯಿತು. ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಬಿಜೆಪಿ ಮಂಡಲದ ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ, ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಸಂಘಟನಾ ಪರ್ವದ ಸಂಚಾಲಕ ದೇವದಾಸ ಶೆಟ್ಟಿ, ಬೂತ್ ಚಲೋ ಕಾರ್ಯಕ್ರಮದ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ, ಸಂಘಟನಾ ಪರ್ವದ ಪ್ರಭಾರಿ ಜಗದೀಶ್ ಶೇಣವ, ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ಮತ್ತಿತರರು ಉಪಸ್ಥಿತರಿದ್ದರು. ವಿಕಾಸ್ ಪುತ್ತೂರು ಅಭಿನಂದನಾ ಭಾಷಣ ಮಾಡಿದರು.
ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮಂಡಲದ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ ವಂದಿಸಿದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.
ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಅಂಗವಾಗಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಬಿಜೆಪಿ ಪ್ರಮುಖರಾದ ಡೊಂಬಯ್ಯ ಅರಳ ನಾರಾಯಣ ಗುರುಗಳ ಜೀವನ ಚರಿತ್ರೆ ತಿಳಿಸಿದರು.
ಭ್ರಷ್ಟಾಚಾರ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಕಾಂಗ್ರೆಸ್ ನಿಂತಿರುವುದು ನಾಚಿಕೆಗೇಡು. ಬಾಂಗ್ಲಾದೇಶದ ಮಾದರಿಯಲ್ಲಿ ರಾಜ್ಯಪಾಲರ ಭವನಕ್ಕೆ ನುಗ್ಗುತ್ತೇವೆ ಎಂಬ ಐವನ್ ಡಿಸೋಜ ಅವರ ಹೇಳಿಕೆ ಖಂಡನಾರ್ಹ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಬಗ್ಗೆ ಇವರಿಗೇಕೆ ಪ್ರೀತಿ? - ಕ್ಯಾ.ಬ್ರಿಜೇಶ್ ಚೌಟ, ಸಂಸದ