ನಾಪೋಕ್ಲುವಿನಲ್ಲಿ ಅಭಿನಂದನಾ ಕಾರ್ಯಕ್ರಮ

31.npk-2
Published on


ಮಡಿಕೇರಿ: ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ ಭಾಗಮಂಡಲ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮ ಸಿರಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಚೆಟ್ಟಿಮಾನಿಯ ನಾಪೋಕ್ಲುವಿನ ಶಾದಿ ಮಹಲ್‌ನಲ್ಲಿ ಇತ್ತೀಚೆಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಗ್ರಾಮ ಸಿರಿ ಆಚರಣಾ ಸಮಿತಿ ಅಧ್ಯಕ್ಷ ಪಾಣತ್ತಲೆ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೋಳಿ ಬೈಲು ವೆಂಕಟೇಶ್, ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಚೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೊಡನೊಳನ ಬಿ.ದಿನೇಶ್ ಗ್ರಾಮ ಸಿರಿಯ ಲೆಕ್ಕಪತ್ರ ಮಂಡನೆ ಮಾಡಿದರು.


ಕುಯ್ಯಮುಡಿ ಮನೋಜ್ ಮಾತನಾಡಿ, ಕಾರ್ಯಕ್ರಮದಿಂದ ಉಳಿಕೆಯಾದ ಹಣವನ್ನು ಚೆಟ್ಟಿಮಾನಿ ಶಾಲಾ ಮೈದಾನದ ಅಭಿವೃದ್ಧಿಗೆ ಬಳಸಲಾಗುವುದು ಎಂದರು. ಸಭೆ ಸರ್ವಾನುಮತದಿಂದ ಅನುಮೋದಿಸಿತು. ನಂತರ ಗ್ರಾಮಸಿರಿ ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದವರನ್ನು ಸನ್ಮಾನಿಸಲಾಯಿತು.


ಕುಂದಚೇರಿ ಗ್ರಾಮ ಪಂಚಾಯಿತಿ ಸದಸ್ಯ ಹ್ಯಾರಿಸ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಹೋಬಳಿ ಅಧ್ಯಕ್ಷ ಸುನಿಲ್ ಪತ್ರಾವೊ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net