

ವಿಜಯವಾಣಿ ಸುದ್ದಿಜಾಲ ಉಡುಪಿ
ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸುವ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕಿದೆ. ಹೀಗಾಗಿ ಪ್ರತಿ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿಯ ಕಾರ್ಯ ಎಲ್ಲ ಶಿಕ್ಷಕರ ಮೇಲಿದೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಭಿಮತ ವ್ಯಕ್ತಪಡಿಸಿದರು.
ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಮೇ 27ರಂದು ಬೇಳಗ್ಗೆ ಆಯೋಜಿಸಿದ್ದ 2022&-23 ಮತ್ತು 2023-&24ನೇ ಸಾಲಿನ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಗಳಿಸಿದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಷಯ ಪರಿವೀಕ್ಷಕ ನಾಗರಾಜ ಎಂ. ವಂದಿಸಿದರು. ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರು ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ಆಗುವುದರಲ್ಲಿ ಆಸಕ್ತರಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಐಎಎಸ್, ಐಪಿಎಸ್ ನಂತಹ ಹುದ್ದೆ ಗಳಿಸಲು ಯತ್ನಿಸಬೇಕು. | ಯಶ್ಪಾಲ್ ಸುವರ್ಣ. ಶಾಸಕ