ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ, ಸರ್ಕಾರಿ ನೌಕರರ ಸಂಘ ಘೋಷಣೆ

9CBP5
Published on

ಚಿಕ್ಕಬಳ್ಳಾಪುರ: ಭವಿಷ್ಯದ ಸಾಧನೆಗಳಿಗೆ ಪ್ರತಿಭಾ ಪುರಸ್ಕಾರವು ಮಕ್ಕಳಿಗೆ ಪ್ರೇರಣೆಯಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ತಿಳಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಶುಕ್ರವಾರ ಕೈಗೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕದಲ್ಲಿ ಕಳೆದ 2019 ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದವರಿಗೆ ಪ್ರತಿ ವರ್ಷ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ. ಇಲ್ಲಿಯವರೆಗೆ 40 ಸಾವಿರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್​.ರವೀಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿ ಡಾ. ಸಿದ್ದರಾಮಣ್ಣ, ಗೌರವಾಧ್ಯಕ್ಷ ಬಿ.ಎಚ್​. ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷ ಬಸವರಾಜು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್​ ಮತ್ತಿತರರು ಇದ್ದರು.

*ಒಪಿಎಸ್​ ಆತಂಕ ಬೇಡ

ಈಗಾಗಲೇ ಹಳೇ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಲಾಗಿದೆ. ಇದರಿಂದ ಆತಂಕಪಡುವ ಅವಶ್ಯಕತೆ ಇಲ್ಲ. ತ್ವರಿತವಾಗಿ ಬೇಡಿಕೆ ಈಡೇರುವ ನಿರೀೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ತಿಳಿಸಿದರು.

ಮೊದಲಿನಿಂದಲೂ ಸಂದ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಇದರ ಪ್ರತಿಲವಾಗಿ ವಿಳಂಬ ಧೋರಣೆಯನ್ನು ಬಿಟ್ಟು ಸರ್ಕಾರವು 7 ನೇ ವೇತನ ಯೋಗದಡಿ ವೇತನ ಹೆಚ್ಚಿಸಿದೆ ಎಂದರು.

*ಕಾರ್ಯಕ್ರಮದಲ್ಲಿ ಭಾಗಿಯಾಗಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆ.17 ರಂದು ಅಭಿನಂದನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ನೌಕರರ ಸಂದ ಅಧ್ಯಕ್ಷರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗವಹಿಸುತ್ತಿದ್ದಾರೆ. ಇದರಲ್ಲಿ ಅಭಿನಂದನೆ ಸಲ್ಲಿಸುವುದರ ಜತೆಗೆ ಬಾಕಿ ಉಳಿದಿರುವ ನೌಕರರ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net