ಕಾಂಗ್ರೆಸ್ ವಿಜಯೋತ್ಸವ

20mdk02
Published on

ಮಡಿಕೇರಿ:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಶನಿವಾರ ನಗರದ ಇಂದಿರಾ ಗಾಂಧಿ ವೃತದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದೆ. ಜನರ ನಂಬಿಕೆಯನ್ನು ಉಳಿಸಿಕೊಳ್ಳಲಾಗುವುದು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಅನುಷ್ಠಾನಕ್ಕೆ ಬರಲಿದೆ. ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಆಶ್ವಾಸನೆಗಳನ್ನು ಕಾಲಮಿತಿಯೊಳಗೆ ಈಡೇರಿಸಲಾಗುವುದು. ಕೊಡಗಿನ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅನ್ನು ಇಲ್ಲಿನ ಜನರು ಬೆಂಬಲಿಸಿದ್ದಾರೆ. ಮತದಾರರ ಆಶಯಕ್ಕೆ ಅನುಗುಣವಾಗಿ ಸರ್ಕಾರ ನಡೆಸಲಾಗುತ್ತದೆ ಎಂದರು.

ಈ ಸಂದರ್ಭ ಪಕ್ಷದ ಪ್ರಮುಖರಾದ ಬಿ.ಎನ್. ಪೃಥ್ವಿ, ವಿ.ಪಿ. ಸುರೇಶ್, ತೆನ್ನೀರ ಮೈನಾ, ಪ್ರಕಾಶ್ ಆಚಾರ್ಯ, ಚುಮ್ಮಿ ದೇವಯ್ಯ, ಪುಷ್ಪ ಪೂಣಚ್ಚ ಸೇರಿ ಕಾಂಗ್ರೆಸ್‌ನ ಹಿರಿಯ ಮುಖಂಡರು, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಭೂತ್ ಅಧ್ಯಕ್ಷರು ಹಾಗೂ ನಗರ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net