ಗಾಂಧಿ ಪುಣ್ಯಸ್ಮರಣೆ ಮತ್ತು ಹುತಾತ್ಮರ ದಿನ

CONGRESS
Published on

ಮಡಿಕೇರಿ:

ರಾಷ್ಟçಪಿತ ಮಹಾತ್ಮ ಗಾಂಧಿ ಅವರು ಹುತಾತ್ಮರಾದ ದಿನದ ಅಂಗವಾಗಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಪುಣ್ಯಸ್ಮರಣೆ ಮತ್ತು ಹುತಾತ್ಮರ ದಿನ ಆಚರಿಸಲಾಯಿತು. ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ದೇಶದ ಸ್ವಾತಂತ್ರö್ಯಕ್ಕಾಗಿ ಮಹಾತ್ಮ ಗಾಂಧಿ ನೀಡಿದ ಕೊಡುಗೆ ಅಪಾರ, ಅವರ ಶಾಂತಿ ಮಾರ್ಗದ ಹೋರಾಟ ಇಂದಿನ ಯುವ ಪೀಳಿಗೆಗೆ ಮಾದರಿಯಾಗಲಿ ಎಂದರು.

ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ. ಮೋಹನ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್, ಸೈನಿಕ ಘಟಕದ ಜಿಲ್ಲಾಧ್ಯಕ್ಷ ಬೊಳ್ಳಿಯಂಡ ಗಣೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net