

ಬೆಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್, ಸದಾ ಬಡವರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸಿ ಶ್ರಮಿಸುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ.(ಎಂಇಐ) ಅಧ್ಯಕ್ಷ ಎಸ್.ಮನೋಹರ್ ಹೇಳಿದ್ದಾರೆ.
ಜನ್ಮದಿನ ನಿಮಿತ್ತ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಅಭಿನಂದನಾ ಸಮಾರಂಭ’ದಲ್ಲಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು, ಸರ್ಕಾರದ ರಚನೆಯಾದ ತಕ್ಷಣ ಇವುಗಳನ್ನು ಅನುಷ್ಠಾನಕ್ಕೆ ತಂದು ರಾಜ್ಯದ ಕೂಟ್ಯಂತರ ಜನರ ಪಾಲಿಗೆ ಆಸರೆಯಾಗಿದೆ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಸಿದ್ಧಾಂತದ ಮೇಲೆ ಪಕ್ಷ, ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಎಲ್ಲ ವರ್ಗ, ಧರ್ಮದವರಿಗೆ ಸಮಾನ ಅವಕಾಶ, ಪ್ರತಿಯೊಬ್ಬ ಕಾರ್ಯಕರ್ತನಿಗೆ ಸ್ಥಾನಮಾನವನ್ನು ಕಾಂಗ್ರೆಸ್ ನೀಡಿದೆ. ಬಿಜೆಪಿಯ ಜನವಿರೋಧಿ ನೀತಿಯನ್ನು ಖಂಡಿಸಿ ಸಾವಿರಾರು ಪ್ರತಿಭಟನೆ ಮಾಡಿ ಜನರ ಪರ ಧ್ವನಿಯಾಗಿ ಹೋರಾಟ ಮಾಡಿದ್ದೇನೆ. ನನ್ನ ಹೋರಾಟಕ್ಕೆ ಸದಾ ಬೆಂಬಲವಾಗಿ ನಿಂತಿರುವ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪಕ್ಷದ ಜನಪರ ಕಾರ್ಯಗಳು ನಾಡಿನ ಜನರಿಗೆ ತಲುಪಿಸಲಿದ್ದೇವೆ. ಮನೆ, ಮನೆಗೆ ಸಾಧನೆ, ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ, 2028ಕ್ಕೆ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ನಿರಂತರ ಹೋರಾಟ ಮುಂದುವರೆಯಲಿದೆ ಎಂದು ಮನೋಹರ್ ತಿಳಿಸಿದರು.
ಸಚಿವ ರಾಮಲಿಂಗಾರೆಡ್ಡಿ, ಮನೋಹರ್‌ಗೆ ಹೂಗುಚ್ಚ ನೀಡಿ ಶುಭ ಕೋರಿದರು. ಪಕ್ಷದ ಮುಖಂಡರಾದ ಆನಂದ್, ಸಲೀಂ, ಪುಟ್ಟ, ದರ್ಶಶ್ ಮತ್ತಿತರರಿದ್ದರು.