ಕಾಂಗ್ರೆಸ್ ಬಂದ್‌ಗೆ ಯಾವ ಬೆಲೆಯೂ ಇಲ್ಲ: ಬಸವರಾಜ ಬೊಮ್ಮಾಯಿ

Bommai-6
Published on

ಮೈಸೂರು: ಮಾರ್ಚ್ 9ರಂದು ಕಾಂಗ್ರೆಸ್ ಕರೆ ನೀಡಿರುವ ಬಂದ್‌ಗೆ ಯಾವ ಬೆಲೆಯೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ಗಂಟೆ ಬಂದ್ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು. ಯಾವತ್ತಾದರೂ ಇಂಥ ಬಂದ್ ಬಗ್ಗೆ ಕೇಳಿದ್ದೀರಾ. ಇದನ್ನು ಬಂದ್ ಎನ್ನುತ್ತಾರಾ? ಭ್ರಷ್ಟಾಚಾರ ಮಾಡಿದವರು, ಜೈಲಿಗೆ ಹೋಗಿ ಬಂದವರು ಕರೆ ಕೊಟ್ಟರೆ ಜನರ ಮುಂದೆ ನಡೆಯುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಅಂದು ಪರೀಕ್ಷೆಗಳಿವೆ. ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತದೆ. ಇದು ಕಾಂಗ್ರೆಸ್‌ನವರಿಗೆ ಅರ್ಥವಾಗುವುದಿಲ್ಲ. ಬಂದ್ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶವೂ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net