ಗ್ಯಾರಂಟಿ ಯೋಜನೆಯ ಮಾಹಿತಿಯನ್ನು ಎಲ್ಲರಿಗೂ ತಿಳಿಸಿ: ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಸೂಚನೆ

Congress booth level meeting mandya
Published on

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ಮೈಸೂರು ವಿಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಬೇಕು. ಈ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮೈಸೂರು ವಿಭಾಗೀಯ ಉಸ್ತುವಾರಿ ಐವಾನ್ ಡಿಸೋಜಾ ಕರೆ ನೀಡಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಚಟುವಟಿಕೆಗಳು ಚುರುಕುಗೊಳ್ಳಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಪ್ರತಿ ಮನೆಮನೆಗೆ ತಿಳಿಸಿ. ಇದು ಪಕ್ಷದ ಕಾರ್ಯವೈಖರಿ ಮತ್ತು ಸಂಘಟನೆಗೆ ಅನುಕೂಲವಾಗಲಿದೆ ಎಂದರು.

ಕೇಂದ್ರ ಸರ್ಕಾರವು ನಮ್ಮ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದೆ. ನಾವು ಇಷ್ಟು ಕೊಡುತ್ತೇವೆ ನೀವು ಇಷ್ಟು ಕೊಡಿ ಎಂಬುದನ್ನು ಹೇಳುತ್ತಿದೆ. ಈ ಹಿಂದೆ ಅವರು ಗ್ಯಾರಂಟಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ರೈತರ ಬಗ್ಗೆ ಚಿಂತನೆಯಿಲ್ಲ, ಬಡವರು, ಕಾರ್ಮಿಕರು, ಯುವಕರು ಹಾಗೂ ಉದ್ಯೋಗದ ಬಗ್ಗೆ ಚಿಂತನೆಯಿಲ್ಲ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಕೆಪಿಸಿಸಿ ಸದಸ್ಯರಾದ ತ್ಯಾಗರಾಜು, ಹನುಮಂತು, ನಗರಸಭೆ ಸದಸ್ಯ ಶ್ರೀಧರ್, ಸೋಮಶೇಖರ್, ಸುಂಡಹಳ್ಳಿ ಮಂಜುನಾಥ್, ರಮೇಶ್, ವೀಣಾ ಶಂಕರ್, ಶಕುಂತಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net