

ಸುಳ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನನ್ನು ಗೆಲ್ಲಿಸಿ ಕರಾವಳಿಯಲ್ಲಿ ಕಾಂಗ್ರೆಸ್‌ನ ಶಕ್ತಿಯನ್ನು ಸಾಬೀತುಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ.
ಸುಳ್ಯದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಈ ಚುನಾವಣೆಯಲ್ಲಿ ಗೆಲುವಿಗೆ ಪಕ್ಷಾತೀತವಾಗಿ ಎಲ್ಲರ ಬೆಂಬಲ ಬೇಕಾಗಿದೆ. ಸಾಮಾನ್ಯ ಕಾರ್ಯಕರ್ತನಾದ ನನಗೆ ವಿಧಾನ ಪರಿಷತ್ ಟಿಕೆಟ್ ನೀಡಿರುವುದು ಪ್ರತಿಯೊಬ್ಬ ಕಾರ್ಯಕರ್ತನಿಗೆ ನೀಡಿದ ಗೌರವ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಜಿ.ಕೃಷ್ಣಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ಎಸ್.ಮಹಮ್ಮದ್, ಜಿ.ಎ.ಬಾವಾ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರು, ಕಾಂಗ್ರೆಸ್ ಮುಖಂಡರಾದ ಧನಂಜಯ ಅಡ್ಪಂಗಾಯ, ನಿತ್ಯಾನಂದ ಮುಂಡೋಡಿ, ಎನ್.ಜಯಪ್ರಕಾಶ್ ರೈ, ಪಿ.ಎಸ್.ಗಂಗಾಧರ, ರಾಜೀವಿ ಆರ್.ರೈ, ನವೀನ್ ಭಂಡಾರಿ, ಎ.ಸಿ.ವಿನಯರಾಜ್, ಸುರೇಶ್ ಅಮೈ ಮೊದಲಾದವರು ಇದ್ದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿದರು, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು. ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಅಭ್ಯರ್ಥಿ ರಾಜು ಪೂಜಾರಿ ಮತ್ತಿತರರಿದ್ದರು.