ಚುನಾವಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ಬೆಂಗಳೂರಿಗೆ ಶಿಫ್ಟ್

27sor1
ಸೊರಬ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿದರು. ಡಿ.ಎಸ್.ಅರುಣ್, ವಿ.ಜಿ.ಪರಶುರಾಮ್, ಟಿ.ಡಿ.ಮೇಘರಾಜ್, ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಕಡಸೂರು ಇದ್ದರು.
Published on

ಸೊರಬ: ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಮಾತನಾಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವಿನ ನಂತರ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿ, ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿ ಶಿವಮೊಗ್ಗದಲ್ಲಿ ಟೆಂಟ್ ಹಾಕಿದ್ದು, ನಂತರ ಬೆಂಗಳೂರಿನಲ್ಲಿ ನೆಲೆಸುತ್ತಾರೆ. ಮೂವರು ಒಂದೊಂದು ದಿಕ್ಕಿಗೆ ಹೋಗುತ್ತಾರೆ ಎಂದು ಲೇವಡಿ ಮಾಡಿದರು.
ಸಚಿವ ಮಧುಗೆ ದ್ವೇಷದ ರಾಜಕಾರಣ ಇದೆಯೇ ಹೊರತು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಗೊತ್ತಿಲ್ಲ. ತಾಳಗುಪ್ಪ ಗ್ರಾಮದ ರೈತರನ್ನು ಒಕ್ಕಲೆಬ್ಬಿಸಲಾಗಿದೆ. ಆ ಕುಟುಂಬಗಳಿಗೆ ನ್ಯಾಯ ಕೊಡಿಸುವ ತಾಕತ್ತು ಈಗ ಅವರಿಗೆ ಇಲ್ಲವೇ ಎಂದು ಪ್ರಶ್ನಿಸಿದರು.
ವಿಧಾನಸಭೆ ಚುನಾವಣೆಯ ಸೋಲು ನನಗೆ ಬಹಳಷ್ಟು ನೋವುಂಟು ಮಾಡಿದೆ. ತಂದೆಯನ್ನು ಮುಖ್ಯಮಂತ್ರಿಯಾಗಿ ಹಾಗೂ ನನ್ನನ್ನು ಸಚಿವನನ್ನಾಗಿ ಮಾಡಿದ ಕ್ಷೇತ್ರದ ಅಭಿವೃದ್ಧಿ ಆಗಿಲ್ಲವೆಂಬ ನೋವಿತ್ತು. ನಂಜುಂಡಪ್ಪ ವರದಿಯಿಂದ ಅಳಿಸಲು ಶ್ರಮವಹಿಸಿ ಶೇ.70 ಅಭಿವೃದ್ಧಿ ಪಡಿಸಿದ್ದೇನೆ. ಕ್ಷೇತ್ರದಲ್ಲಿ ಕಾಣುತ್ತಿಲ್ಲ ಎಂದು ಟೀಕಿಸುವವರಿದ್ದಾರೆ. ಆದರೆ ನಾನೇನು ಎಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು, ಮುಖಂಡರಾದ ವಿ.ಜಿ.ಪರಶುರಾಮ್, ಎಂ.ಡಿ.ಉಮೇಶ್, ಗುರುಕುಮಾರ್ ಪಾಟೀಲ್, ಪ್ರಶಾಂತ್, ಸೋಮಶೇಖರ್, ಎಂ.ನಾಗಪ್ಪ, ಸುಧಾ ಶಿವಪ್ರಸಾದ್, ಲಲಿತಾ, ಶಬ್ಬೀರ್, ರಾಜು ಮಾವಿನ, ದೇವೇಂದ್ರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net