

ಮೂಡಿಗೆರೆ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿ ಇಲ್ಲದ ಭ್ರಷ್ಟ ಮತ್ತು ಪ್ರಜಾವಿರೋಧಿ ಸರ್ಕಾರವಾಗಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಆರೋಪಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮೂಡಿಗೆರೆ ಲಯನ್ಸ್ ವೃತ್ತದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಎಲ್ಲ ಸಚಿವರು ಹಣ ಮಾಡುವ ಉದ್ದೇಶ ಹೊಂದಿದ್ದು, ರಾಜ್ಯವನ್ನು ಕೊಳ್ಳೆ ಹೊಡೆಯುವುದರಲ್ಲಿ ಮಗ್ನರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಒಂದು ಗುಂಪು ಮುಖ್ಯಮಂತ್ರಿಯ ಬದಲಾವಣೆ ಬಯಸುತ್ತಿದ್ದು ಒಬ್ಬರಿಗೊಬ್ಬರು ಕಾಲು ಎಳೆಯುವುದರಲ್ಲಿ ತಲ್ಲೀನರಾಗಿದ್ದಾರೆ ಎಂದು ದೂರಿದರು.
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಪೂರೈಸಲು ಸರ್ಕಾರ ವಿಲವಾಗಿದೆ. ರಾಜ್ಯದ ಬೊಕ್ಕಸ ಖಾಲಿಯಾಗಿದ್ದು , ಇದನ್ನು ಸರಿದೂಗಿಸಲು ಜನಸಾಮಾನ್ಯರ ಮೇಲೆ ಅಗತ್ಯ ವಸ್ತುಗಳಾದ ಹಾಲು, ವಿದ್ಯುತ್, ಬಸ್ ಟಿಕೆಟ್, ಡೀಸೆಲ್ ಮತ್ತು ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಚಪ್ಪಡಿ ಎಳೆದಿದ್ದಾರೆ. ಮತದಾರರರಿಗೆ ಈಗ ತಪ್ಪಿನ ಅರಿವಾಗಿದ್ದು, ಮುಂದಿನ ದಿನಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಮಂಡಲ ಅಧ್ಯಕ್ಷ ಟಿ.ಎಂ.ಗಜೇಂದ್ರ, ಸರೋಜಾ ಸುರೇಂದ್ರ, ಎಂ.ಆರ್.ಜಗದೀಶ್, ಮನೋಜ್ ಹಳೇಕೋಟೆ, ನಯನ್ ತಳವಾರ,ಸುನಿಲ್ ಮಣ್ಣಿಕೆರೆ, ವಿನಯ್, ಬಾಲು ಶೆಟ್ಟಿ, ಪ್ರಶಾಂತ್, ಲೋಕೇಶ್ ಮತ್ತಿತರರು ಇದ್ದರು.