ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ದಾಳಿಗೆ ಕಾಂಗ್ರೆಸ್‌ನಿಂದ ಖಂಡನೆ

RAJU ALLGUR (CONG)-3
ರಾಜು ಆಲಗೂರ
Published on

ವಿಜಯಪುರ : ಮಡಿಕೇರಿಯಲ್ಲಿ ನೆರೆಹಾನಿ ವೀಕ್ಷಣೆಗೆ ತೆರಳಿದ್ದ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ದಾಳಿ ಮಾಡಿದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ರಾಜು ಆಲಗೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೊಂದು ಬಿಜೆಪಿ ಪ್ರಾಯೋಜಿತ ಕೃತ್ಯ. ಬಿಜೆಪಿ ಗೂಂಡಾಗಳು ನಡೆಸಿದ ಮೊಟ್ಟೆ ಎಸೆತದ ಘಟನೆ ಖಂಡನೀಯವಾಗಿದ್ದು, ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹವಾಗಿದೆ. ಸಿದ್ದರಾಮಯ್ಯ ಅವರ ಜನಬೆಂಬಲ ಸಹಿಸದೆ ಹತಾಶೆ ಮನೋಭಾವದಿಂದ ಬಿಜೆಪಿ ನಾಯಕರ ಪ್ರಚೋದನೆಯಿಂದ ಕಾರ್ಯಕರ್ತರು ಹಾಗೂ ಹಿಂದು ಸಂಘಟನೆಗಳು ಇಂತಹ ಕೀಳುಮಟ್ಟದ ಹೋರಾಟಗಳಿಗೆ ಇಳಿದಿದ್ದು, ಬಿಜೆಪಿಯ ಸಂಸ್ಕೃತಿಯನ್ನು ಇದು ಎತ್ತಿ ತೋರಿಸುತ್ತದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಲವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮಾಡಿದ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕರ ಪೂರ್ವಯೋಜಿತ ಕಾರ್ಯಕ್ರಮಕ್ಕೆ ಬರುವುದನ್ನು ಮನಗಂಡು ತಮ್ಮ ವಿಲತೆಗಳನ್ನು ಮುಚ್ಚಿಹಾಕಲು ಇಂತಹ ನೀಚ ಕೃತ್ಯಕ್ಕೆ ಕೈಹಾಕಿದ್ದು, ಜನ ಇದನ್ನು ಸಹಿಸಲಾರರು. ಈ ಕೃತ್ಯ ಬರೀ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನವಲ್ಲ, ಇಡೀ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಹಿಂದುಳಿದ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಜನ ಬುದ್ಧಿ ಕಲಿಸದೆ ಬಿಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲಿನ ಭದ್ರತಾ ಲೋಪದ ಬಗ್ಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರನ್ನು ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬಿಜೆಪಿಯ ನಾಯಕರೂ ಇಂತಹ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದು ಎಚ್ಚರಿಕೆ ಗಂಟೆಯಾಗಿದ್ದು, ಬಿಜೆಪಿ ನಾಯಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net