ಬಿಜೆಪಿ ಪಕ್ಷಕ್ಕೆ ನೈತಿಕತೆ ಇಲ್ಲ: ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದ್ಯಾವಪ್ಪ ಟೀಕೆ

Congress criticizes BJP Mandya
oppo_0
Published on

ಮಂಡ್ಯ: ಬಿಜೆಪಿ ಪಕ್ಷಕ್ಕೆ ಸಂವಿಧಾನದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ವಾಗ್ದಾಳಿ ನಡೆಸಿದರು.

ತುರ್ತು ಪರಿಸ್ಥಿತಿ ವಿರೋಧಿಸುವ ನೆಪದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಭಾರತೀಯ ಜನತಾ ಪಕ್ಷಕ್ಕೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ. ಬಿಜೆಪಿ ಸಂಸದರಾಗಿದ್ದ ಅನಂತಕುಮಾರ ಹೆಗಡೆ ನಾವು ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿರುವುದನ್ನು ಇಡೀ ದೇಶವೇ ನೋಡಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಬಿಜೆಪಿ ಹೇರಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಡವರ ಪರವಾಗಿರುವ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಮದ್ದೂರು ಉಸ್ತುವಾರಿ ಎಚ್.ವಿ.ನಾಗರಾಜು, ರಾಜ್ಯ ಕಾರ್ಯದರ್ಶಿ ಎಂ.ಬಿ.ಶಕುಂತಲಾ, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಬಿ.ಟಿ.ಗುರುರಾಜ್, ಡಿ.ಕೆ.ಶಿವಕುಮಾರ್ ಸಂಘದ ಜಿಲ್ಲಾಧ್ಯಕ್ಷ ಪಿ.ಎನ್.ಸಿದ್ದೇಗೌಡ, ಕೋಣನಹಳ್ಳಿ ಮಹೇಶ್, ಉಮ್ಮಡಹಳ್ಳಿ ನಾಗೇಶ್, ಇಂಟೆಕ್ ಜಿಲ್ಲಾಧ್ಯಕ್ಷ ವೈ.ಎಂ.ನಿಂಗೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net