ಮ್ಯಾಮ್ಕೋಸ್ ಆಡಳಿತ ಮಂಡಳಿ ಬದಲಾವಣೆಗೆ ಕಾಂಗ್ರೆಸ್ ನಿರ್ಧಾರ

3nrp 1
Published on

ಎನ್.ಆರ್.ಪುರ: ಮ್ಯಾಮ್ಕೋಸ್ ಸಂಸ್ಥೆ ರಾಜಕೀಯಗೊಂಡಿದ್ದು, ಇದರಲ್ಲಿ ಬದಲಾವಣೆ ತರಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಹಕಾರ ಸಂಸ್ಥೆಗಳು ರೈತರಿಗೆ ಹತ್ತಿರವಾಗಬೇಕೆ ಹೊರತು ರಾಜಕೀಯ ಪಕ್ಷಕ್ಕೆ ಹತ್ತಿರವಾಗಿರಬಾರದು. ಮ್ಯಾಮ್ಕೋಸ್ ಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಸಹಕಾರ ಪ್ರತಿಷ್ಠಾನದ ನೇತೃತ್ವದಲ್ಲಿ 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ೆ.4ರಂದು ಚುನಾವಣೆ ನಡೆಯಲಿದೆ ಎಂದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಚನ್ನಗಿರಿ, ಹೊನ್ನಾಳಿ ತಾಲೂಕಿನಲ್ಲಿ ಮ್ಯಾಮ್ಕೋಸ್ ಸದಸ್ಯರಿದ್ದಾರೆ. ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಎಂಎಡಿಬಿ ಅಧ್ಯಕ್ಷ ಮಂಜುನಾಥಗೌಡ ಸಂಘಟನೆ ಮಾಡುತ್ತಿದ್ದಾರೆ. ಎರಡು ಜಿಲ್ಲೆಗಳ ಶಾಸಕರು ಬೆಂಬಲ ನೀಡಲಿದ್ದಾರೆ. ಮ್ಯಾಮ್ಕೋಸ್ ಸದಸ್ಯರುರಾಷ್ಟ್ರೀಯ ಸಹಕಾರ ಪ್ರತಿಷ್ಠಾನದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net