

ಕೊಪ್ಪಳ: ರಾಜ್ಯ ಮಾತ್ರವಲ್ಲ ದೇಶದಲ್ಲೂ ಕಾಂಗ್ರೆಸ್ ಕಥೆ ಮುಗಿದಿದೆ. ರಾಜ್ಯದಲ್ಲಂತೂ ಕಾಂಗ್ರೆಸ್ ಎರಡು ಭಾಗವಾಗಿದೆ ಎಂಬುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಮಾತನಾಡಿಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ಕುರಿತು ಈ ರೀತಿಯಾಗಿ ಟೀಕೆ ಮಾಡಿದರು.
ರಾಜ್ಯ ಕಾಂಗ್ರೆಸ್ನಲ್ಲಿ ಇಬ್ಬರು ದೊಡ್ಡ ಸುಳ್ಳುಗಾರರು ಇದ್ದಾರೆ. ಅವರು ಲೆಕ್ಕ ಇಲ್ಲದಷ್ಟು ಸುಳ್ಳು ಹೇಳುತ್ತಿದ್ದಾರೆ. ಎಲ್ಲ ಕಡೆ ಗ್ರಾಮ ಪಂಚಾಯತ್ನಲ್ಲಿ ಕಾಂಗ್ರೆಸ್ನವರೇ ಗೆದ್ದಿದ್ದಾರೆ ಎಂದು ಹೇಳುತ್ತಿದ್ದಾರೆ. ಅಂಥವರನ್ನು ಇಲ್ಲಿಗೆ ಕರೆತಂದು ತೋರಿಸಬೇಕು ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.
ಮೈಸೂರು ಮಹಾನಗರಪಾಲಿಕೆಯಲ್ಲಿನ ಮೇಯರ್ ಚುನಾವಣೆ ನಂತರ ಕಾಂಗ್ರೆಸ್ ಎರಡು ಭಾಗವಾಗಿದೆ. ಒಂದು ಕಡೆ ಸಿದ್ದರಾಮಯ್ಯ ಅವರು ರೆಸಾರ್ಟ್ಗೆ ಹೋದರು, ಇನ್ನೊಂದು ಕಡೆ ಡಿ.ಕೆ.ಶಿವಕುಮಾರ್ ಇದರಲ್ಲಿ ನಮ್ಮ ಪಾತ್ರ ಇಲ್ಲ ಎನ್ನುತ್ತಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಕಥೆ ಮುಗಿದಂತೆ ಎಂದು ಈಶ್ವರಪ್ಪ ಹೇಳಿದರು. ಕಾಂಗ್ರೆಸ್ ವಾಪಸ್ ಅಧಿಕಾರಕ್ಕೆ ಬಂದರೆ ಗೋ ಹತ್ಯೆಗೆ ಅವಕಾಶ ಕೊಡುತ್ತಾರಂತೆ. ಹೇಳಿ ಇಂಥವರು ಬೇಕಾ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ