ಅರ್‌ಎಸ್‌ಎಸ್ ವಿಷಯದಲ್ಲೇ ಕಾಂಗ್ರೆಸ್‌ನ ಪತನ

b y raghavendra
Published on

ಶಿವಮೊಗ್ಗ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತುಗೊಂಡಿದ್ದಾರೆ. ಆರ್‌ಎಸ್‌ಎಸ್‌ನ ದಂಡ ಹಿಡಿದವರನ್ನು ಪ್ರಶ್ನೆ ಮಾಡಲಾಗುತ್ತಿದೆ. ಸ್ವಯಂ ಸೇವಕರು ದೇಶದ ಕೆಲಸ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್ ಮೇಲೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆಯುತ್ತಿದೆ. ಇದು ಕಾಂಗ್ರೆಸ್‌ನ ಪತನಕ್ಕೆ ಕಾರಣವಾಗಲಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವಾರದಿಂದ ಹಲವು ಸಚಿವರು, ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ನೀಡಲು ಅಲೆಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಕಾಂಗ್ರೆಸ್‌ನ ಅಧೋಗತಿಗೆ ಕಾರಣವಾಗಲಿದೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಂತ್ರಿ ಸ್ಥಾನ ಪಡೆಯಲು, ಹೈಕಮಾಂಡ್ ಮೆಚ್ಚುಗೆ ಗಳಿಸಲು ಮನಬಂದಂತೆ ಮಾತನಾಡುತ್ತಿದ್ದಾರೆ. ಆದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೆಂಕಿ ಹಚ್ಚಿದವರು ವಿರುದ್ಧದ ಪ್ರಕರಣವನ್ನು ಈ ಸರ್ಕಾರ ಹಿಂದಕ್ಕೆ ಪಡೆಯುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net