ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ: ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

mandya ..
Published on

ಮದ್ದೂರು: ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದ್ದು, ನಾಗಮಂಗಲ ಸೇರಿದಂತೆ ರಾಜ್ಯದೆಲ್ಲೆಡೆ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.

ತಾಲೂಕಿನ ಕೊಪ್ಪ ಗ್ರಾಮದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕೊಪ್ಪ 1 ಮತ್ತು 2 ನೇ ವೃತ್ತದ ಬೂತ್ ಸಮಿತಿ ಸದಸ್ಯರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಗಮಂಗಲ ಕ್ಷೇತ್ರದಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಮಂಡ್ಯ, ಮದ್ದೂರು ಸೇರಿದಂತೆ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ಕೆಲವು ಗೊಂದಲವಿದ್ದು, ಅವುಗಳನ್ನು ಶೀಘ್ರವಾಗಿ ಬಗೆಹರಿಸುತ್ತೇವೆ. ಮದ್ದೂರು ತಾಲೂಕಿನಲ್ಲಿ ಎಸ್.ಗುರುಚರಣ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿರುವುದು ವೈಯಕ್ತಿವಾಗಿ ಬೇಸರ ತಂದಿದೆ. ಆದರೂ, ಪಕ್ಷದ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಬೇಕು ಎಂದರು.

ಗುರುಚರಣ್ ಅವರಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣ ಆಕ್ರೋಶಗೊಂಡ ಅವರ ಬೆಂಬಲಿಗರು ಕಾಂಗ್ರೆಸ್ ಫ್ಲೆಕ್ಸ್, ಬ್ಯಾನರ್‌ಗಳನ್ನು ಹರಿದು ಹಾಕಿ ಪ್ರತಿಭಟನೆ ಮಾಡಿದ್ದಾರೆ. ಅವರ ಮೇಲೆ ಪಕ್ಷದ ವತಿಯಿಂದ ಯಾವುದೇ ಶಿಸ್ತಿನ ಕ್ರಮ ಕೈಗೊಳ್ಳುವುದಿಲ್ಲ. ಬದಲಿಗೆ ಅವರನ್ನು ಸಮಾಧಾನ ಮಾಡಿ ಜಿಲ್ಲೆಯಲ್ಲಿ ಹೆಚ್ಚಿನ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ್‌ಕೊಪ್ಪ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಎಂ.ಕ್ರಾಂತಿಸಿಂಹ, ಮುಖಂಡರಾದ ಕೊಪ್ಪ ರಮೇಶ್, ತಮ್ಮಣ್ಣನಾಯಕ, ಘಟ್ಟಹಳ್ಳಿ ಹರೀಶ್, ಪರ್ವಿಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net