

ಹುಬ್ಬಳ್ಳಿ: ಗಣರಾಜ್ಯೋತ್ಸವ ಅಂಗವಾಗಿ ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಕಚೇರಿ ಆವರಣದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು.
ಪಕ್ಷದಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ. ಕಾಂಗ್ರೆಸ್ ವಕ್ತಾರ ಗಂಗಾಧರ ದೊಡ್ಡವಾಡ ಅವರನ್ನು ಸನ್ಮಾನಿಸಲಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ ಮೆಹರವಾಡೆ ಮಾತನಾಡಿ, ದೊಡ್ಡವಾಡ ಅವರು ಪಕ್ಷದ ಗಟ್ಟಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸೇವೆ ಸ್ಮರಣೀಯ ಎಂದರು.
ಗ್ರಾಮಾಂತರ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹುಸ್ಸೇನ ಹಳ್ಳೂರ, ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಸ್. ಮೆಹಬೂಬ ಪಾಷಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಡಂಗನವರ, ಅಲ್ತಾಫ್ ಕಿತ್ತೂರ, ಮಹೇಶ ದಾಬಡೆ, ಶಾರುಖ್ ಮುಲ್ಲಾ, ನವೀದ್ ಮುಲ್ಲಾ, ದೊಡ್ಡರಾಮಪ್ಪ ದೊಡ್ಮನಿ, ದೀಪಾ ಗೌರಿ, ಸುನಿತಾ ಹುರಕಡ್ಲಿ ಇದ್ದರು.