ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ

16adarshkdga7
Published on

ಮಡಿಕೇರಿ: ಮುಂಬರುವ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಮುಖಂಡರು ಸ್ಪಂದಿಸಬೇಕು. ಈ ಬಾರಿಯ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರು ಈಗಿನಿಂದಲೇ ಕಾರ್ಯೋನ್ಮುಖವಾಗಬೇಕು. ಜನಪರ ಹೋರಾಟಗಳಲ್ಲಿ ಭಾಗಿಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಮುಂಬರುವ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಬ್ಲಾಕ್ ಕಾಂಗ್ರೆಸ್‌ನ ಗುರಿ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬೂತ್ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಪಕ್ಷವನ್ನು ಬಲಗೊಳಿಸುವಂತೆ ಸಲಹೆ ನೀಡಿದರು.

ಜಿ.ಪಂ.ಸದಸ್ಯೆ ಕೆ.ಪಿ.ಚಂದ್ರಕಲಾ ಮಾತನಾಡಿ, ಬೂತ್ ಮತ್ತು ವಲಯ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಮುಂದಿನ ಗ್ರಾ.ಪಂ ಚುನಾವಣೆಗೆ ಸಜ್ಜಾಗುವಂತೆ ತಿಳಿಸಿದರು.

ಪಕ್ಷದ ಹಿರಿಯ ಮುಖಂಡ ಎಚ್.ಎಸ್.ಚಂದ್ರಮೌಳಿ ಮಾತನಾಡಿ, ಕೊಡಗು ಜಿಲ್ಲಾ ಕಾಂಗ್ರೆಸ್ ನಮಗೆಲ್ಲರಿಗೂ ಮನೆಯಂತಿದ್ದು, ಅದನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಅಲ್ಲದೆ ಪಕ್ಷದ ಬಲವರ್ಧನೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಖಜಾಂಚಿ ಎಚ್.ಎಂ.ನಂದಕುಮಾರ್, ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net