

ಉಡುಪಿ: ಅಂಬೇಡ್ಕರ್ ಸಂವಿಧಾನ ರಚಿಸುವ ಮುನ್ನ ಈ ದೇಶ ಮನುಸ್ಮ$ತಿ ಆಧಾರದಲ್ಲಿ ನಡೆಯುತ್ತಿತ್ತು. ಅವರೊಬ್ಬ ಮಹಾನ್ ಮಾನವತಾವಾದಿಯಾಗಿದ್ದು, ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಮಾನ ಮನಸ್ಕ ಸಂಟನೆಗಳ ಸಹಯೋಗದೊಂದಿಗೆ ನಡೆದ ಗಾಂಧಿ ಭಾರತ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಮೀಸಲಾತಿಯೇ ಇಲ್ಲದ ಕಾಲದಲ್ಲಿ ಸಂವಿಧಾನ ರಚಿಸಲು ಅಂಬೇಡ್ಕರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಏಕೆಂದರೆ ಅವರು ಏಳು ಪಿಎಚ್ ಡಿ ಸಹಿತ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ ,ಕಾನೂನು ಶಾಸ್ತ್ರದಲ್ಲಿ ಪಾಂಡಿತ್ಯ ಹೊಂದಿದ್ದರು. ಅವರು ಪರಿಶಿಷ್ಟ ಜಾತಿಯ ತಮ್ಮ ಸಮುದಾಯದವರಿಗೆ ಪ್ರತ್ಯೇಕ ಮತದಾನದ ಹಕ್ಕು ಕೇಳಿದ್ದರು. ಆದರೆ ಗಾಂಧೀಜಿ ಒಪ್ಪಲಿಲ್ಲ. ಇದರಿಂದ ಹಿಂದುಗಳ ವಿಭಜನೆ ಆಗುತ್ತೆ ಬೇಡವೆಂದರು. ಆದರೂ ಹಠಬಿಡದೇ ಇದ್ದ ಪರಿಣಾಮ ಗಾಂಧೀಜಿ ಉಪವಾಸ ಆರಂಭಿಸಿದರು. ಗಾಂಧೀಜಿಯ ಸಾವಿಗೆ ತಾನು ಕಾರಣ ಆಗಬಾರದು ಎಂಬ ಕಾರಣಕ್ಕೆ ಕೊನೆಗೆ ಒಪ್ಪಂದಕ್ಕೆ ಸಹಿ ಹಾಕಿದರು. ದೇಶದ ಸ್ವಾತಂತ್ರ್ಯದ ಜೊತೆ ತನ್ನ ಜನರ ಸುಧಾರಣೆ ಅಂಬೇಡ್ಕರ್ ಗೆ ಆದ್ಯತೆಯಾಗಿತ್ತು. ಗಾಂಧೀಜಿ ಮತ್ತು ಅಂಬೇಡ್ಕರ್ ವೈಚಾರಿಕ ಭಿನ್ನಾಭಿಪ್ರಾಯ ಹೊಂದಿದ್ದರೂ ಶತ್ರುಗಳಾಗಿರಲಿಲ್ಲ ಎಂದರು.
ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್,ಎಂ.ಎ. ಗೂರ್, ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಅಶೋಕ್ ಕುಮಾರ್ ಕೊಡವೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಲಾವಣ್ಯ ಬಲ್ಲಾಳ್, ದಿನಕರ ಹೇರೂರು, ನಗರಸಭಾ ಸದಸ್ಯ ರಮೇಶ್ ಕಾಂಚನ್, ಮುಖಂಡರಾದ ಪ್ರಶಾಂತ್ ಜತ್ತನ್ನ, ರಾವೇಂದ್ರ ಶೆಟ್ಟಿ, ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.