

ಬಸವನಬಾಗೇವಾಡಿ: ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸರ್ಕಾರದ ಸಾಧನೆಗಳೇ ಶ್ರೀರಕ್ಷೆಯಾಗಿವೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಘಟಕದಿಂದ ಸಿಹಿ ಹಂಚಿ, ಪಟಾಕ್ಷಿ ಸಿಡಿಸಿ, ವಿಜಯೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಅವರು ಮಾತನಾಡಿದರು.
ಚುನಾವಣೆಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿರುವ ಭರವಸೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ ನುಡಿದಂತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದರು.
ವಿಜಯೋತ್ಸವದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಟಿ.ಎ.ಪಿ.ಎಂ.ಸಿ ಅಧ್ಯಕ್ಷ ಶೇಖರಗೌಡ ಪಾಟೀಲ, ವಿಜಯಪುರ ಜನತಾ ಬಜಾರ್ ಅಧ್ಯಕ್ಷ ಬಾಲಚಂದ್ರ ಮುಂಜಾನೆ, ನಿರ್ದೇಶಕ ಭರತ್ ಅಗರವಾಲ, ನಾಗನಗೌಡ ಬಿರಾದಾರ, ಸುರೇಶಗೌಡ ಪಾಟೀಲ, ಸಂಕನಗೌಡ ಪಾಟೀಲ, ದೇವೇಂದ್ರ ಚವ್ಹಾಣ, ಅಪ್ಪು ವಾಡೇದ, ಶಂಕರಗೌಡ ಬಿರಾದಾರ, ಸಂಗಮೇಶ ಓಲೇಕಾರ, ಪ್ರವೀಣ ಪೂಜಾರಿ, ರವಿ ರಾಠೋಡ, ಪರಶುರಾಮ ಜಮಖಂಡಿ, ಮಹಾಂತೇಶ ಸಾಸಾಬಾಳ, ರಮಜಾನ್ ಹೆಬ್ಬಾಳ, ಸಂಗನಬಸು ಪೂಜಾರಿ, ಪಂಚಾಕ್ಷರಿ ಕಾಳಹಸ್ತೆಶ್ವರಮಠ, ಬದ್ರು ಮಣ್ಣೂರ, ದಶಗೀರ ತಾಂಬೊಳ, ಕಾಶಿನಾಥ ಹಿಂಗೊಲಿ, ಸಂಗಮೇಶ ಜಾಲಗೇರಿ ಇತರರಿದ್ದರು.