ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು

Congress government is emphasizing on women empowerment
ಸಿಂದಗಿ ಪಟ್ಟಣದ ಬಸ್‌ನಿಲ್ದಾಣದಲ್ಲಿ ಶಾಸಕ ಅಶೋಕ ಮನಗೂಳಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ನಿಂಗಣ್ಣ ಬಿರಾದಾರ, ಸೋಮೇಶ ಗೆಜ್ಜಿ, ಅಧಿಕಾರಿ ಜಯಂತ ಮತ್ತಿತರರಿದ್ದರು.
Published on

ಸಿಂದಗಿ: ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಒತ್ತು ನೀಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಸರ್ಕಾರ ಹಾಗೂ ರಾಜ್ಯ ನಾಯಕರು ನುಡಿದಂತೆ ನಡೆದು ಚುನಾವಣೆಯಲ್ಲಿ ಕೊಟ್ಟ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ನಿರುದ್ಯೋಗಿ ಯುವಕರಿಗೆ ಯುವನಿಧಿ ಶೀಘ್ರದಲ್ಲಿಯೇ ಜಾರಿಗೊಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾನ್ನಿಧ್ಯ ವಹಿಸಿದ್ದ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿ, ಮಹಿಳೆಯರಿಗಾಗಿ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿ ಮಾಡಲಾಗಿದೆ. ಇದರ ದುರುಪಯೋಗ ಪಡಿಸಿಕೊಳ್ಳದೇ, ಅಗತ್ಯವಿರುವ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಹಸೀಲ್ದಾರ್ ನಿಂಗಣ್ಣ ಬಿರಾದಾರ, ಪಿಎಸ್‌ಐ ಸೋಮೇಶ ಗೆಜ್ಜಿ, ಸಾರಿಗೆ ಅಧಿಕಾರಿ ಜಯಂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net