ಒಳಮೀಸಲು ಜಾರಿಗೆ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ

10 mlv 1
ಮಳವಳ್ಳಿ ತಾಲೂಕಿನ ಬಿ.ಜಿ.ಪುರ ಗ್ರಾಮದ ಪ್ರಮುಖ ವೃತ್ತದಲ್ಲಿ ಬುಧವಾರ ರಾತ್ರಿ ಒಳ ಮೀಸಲಾತಿ ಜಾರಿಗಾಗಿ ನಡೆಸುತ್ತಿರುವ ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿರುವ ಭಾಸ್ಕರ್ ಪ್ರಸಾದ್ ಮಾತನಾಡಿದರು. ಕೃಷ್ಣಮೂರ್ತಿ, ಹೂವಿನಕೊಪ್ಪಲು ಪ್ರಶಾಂತ್, ಮಂಜುನಾಥ, ನಟರಾಜು, ಶ್ರೀಧರ್, ಶಿವಾನಂದ್ ಇದ್ದರು.
Published on

ಮಳವಳ್ಳಿ: ಒಳಮೀಸಲಾತಿ ಜಾರಿಗಾಗಿ ಮೀನಮೇಷ ಏಣಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಒಳ ಮೀಸಲಾತಿಗಾಗಿ ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿದ್ದ ಮುಖಂಡ ಭಾಸ್ಕರ್ ಪ್ರಸಾದ್ ಹೇಳಿದರು.

ತಾಲೂಕಿನ ಬಿ.ಜಿ.ಪುರ ಗ್ರಾಮದ ವೃತ್ತಕ್ಕೆ ಬುಧವಾರ ರಾತ್ರಿ ಆಗಮಿಸಿದ ಒಳ ಮೀಸಲಾತಿ ಜಾರಿಗಾಗಿ ನಡೆಸುತ್ತಿರುವ ಕ್ರಾಂತಿಕಾರಿ ರಥಯಾತ್ರೆಯಲ್ಲಿ ಮಾತನಾಡಿ, ಮೂರು ದಶಕಗಳಿಂದ ಒಳಮೀಸಲಾತಿಗಾಗಿ ನಿರಂತರ ಹೋರಾಟ ನಡೆಯುತ್ತಿದೆ. ಅಂದಿನಿಂದ ಅಧಿಕಾರಕ್ಕೆ ಬರುವ ಸರ್ಕಾರಗಳು ಕೇವಲ ಭರವಸೆಗಳನ್ನು ನೀಡುತ್ತ ಮುಂದೂಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಸಮುದಾಯದ ಮತ ಪಡೆಯಲು ಒಳ ಮೀಸಲಾತಿ ಜಾರಿಗೆ ತರುವುದಾಗಿ ಆಣೆ ಪ್ರಮಾಣಗಳನ್ನು ಮಾಡುವ ಮೂಲಕ ಮೂಗಿಗೆ ತುಪ್ಪ ಸವರುವ ಭರವಸೆ ನೀಡುತ್ತಾರೆ. ಎಲ್ಲ ಪಕ್ಷಗಳ ನಾಯಕರು ಅಧಿಕಾರಕ್ಕೆ ಬರುತ್ತಿದ್ದಂತೆ ಮರೆತು ಬಿಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮುದಾಯದ ಜನರನ್ನು ಜಾಗೃತಗೊಳಿಸಲು ಜೂ.9ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಳಮೀಸಲಾತಿ ಜಾರಿಗಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ತಿಂಗಳ ಗಡುವು ತೆಗೆದುಕೊಂಡಿದೆ. ಒಳಮೀಸಲಾತಿ ಜಾರಿಗಾಗಿ ಸಮೀಕ್ಷೆ ನಡೆಸಲು ಮುಂದಾಗಿದ್ದು, ಸಮೀಕ್ಷೆ ಮಾಡಲು ಬಂದಾಗ ಜಾತಿ ಕಾಲಂನಲ್ಲಿ ಮಾದಿಗ ಎಂದು ಎಲ್ಲರೂ ಕಡ್ಡಾಯವಾಗಿ ನಮೂದಿಸಬೇಕು ಎಂದರು.

ಮುಖಂಡರಾದ ಕೃಷ್ಣಮೂರ್ತಿ, ಹೂವಿನಕೊಪ್ಪಲು ಪ್ರಶಾಂತ್, ಮಂಜುನಾಥ, ನಟರಾಜು, ಶ್ರೀಧರ್, ಶಿವಾನಂದ್, ರಮ್ಯಾ, ಸರಸ್ವತಿ, ನೇತ್ರಾವತಿ, ಸಾಹಳ್ಳಿ ಸುಜಾತಾ, ಬಾಳೆಹೊನ್ನಿಗ ಶಿವಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net