ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

Crime Logo
Published on

ರಾಣೆಬೆನ್ನೂರ: ನಗರದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗಳನ್ನು ಮತದಾರರಿಗೆ ಹಂಚಿಕೆ ಮಾಡುತ್ತಿದ್ದ ನಾಲ್ವರ ವಿರುದ್ಧ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ನಗರದ ಕೇದಾರನಾಥ ದುರ್ಗದ, ರಾಜು ಕಾಕೋಳ, ಚಂದ್ರಪ್ಪ ಹೊನ್ನಾಳಿ, ಫಕ್ಕೀರಗೌಡ ಪಾಟೀಲ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿರುವುದು.
ಇವರ ವಿರುದ್ಧ ಪ್ಲೇಯಿಂಗ್ ಸ್ಕ್ವಾಡ್ ರುದ್ರಪ್ಪ ಭಜಂತ್ರಿ ಎಂಬುವರು ದೂರು ದಾಖಲಿಸಿದ್ದಾರೆ. ಆರೋಪಿತರು ನಗರದ ಕಂಚಗಾರ ಓಣಿಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ಗಳನ್ನು ಮತದಾರರಿಗೆ ಹಂಚುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಗ್ಯಾರಂಟಿ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net