ಮಾ.4ರಂದು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ: ಎಚ್.ಎಸ್.ಸುಂದರೇಶ್

SHIVAMOGGA
SHIVAMOGGA
Published on

ಶಿವಮೊಗ್ಗ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ಗಳ ವಿತರಣಾ ಸಮಾರಂಭ ಮತ್ತು ಜಿಲ್ಲಾಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆ ಮಾ.4ರಂದು ಬೆಳಗ್ಗೆ 10ಕ್ಕೆ ಲಗಾನ್ ಕಲ್ಯಾಣ ಮಂದಿರದಲ್ಲಿ ನಡೆಯಲಿದ್ದು ಕೆಪಿಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಗ್ಯಾರೆಂಟಿ ಕಾರ್ಡ್‌ಗಳ ವಿತರಣೆ ಮಾಡುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.

ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಉಚಿತ ಅಕ್ಕಿ ಸೇರಿದಂತೆ ಹತ್ತು ಹಲವು ಯೋಜನೆಗಳ ಭರವಸೆಯುಳ್ಳ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 40 ಸಾವಿರ ಕಾರ್ಡ್‌ಗಳನ್ನು ವಿತರಿಸುವ ಗುರಿ ಇತ್ತು. ಆದರೆ ಅಷ್ಟು ಕಾರ್ಡ್‌ಗಳು ಸಾಲುತ್ತಿಲ್ಲ ಎಂಬ ಕಾರಣಕ್ಕೆ ಇದೀಗ 70ರಿಂದ 80 ಸಾವಿರ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಮಯೂರ ಜಯಕುಮಾರ್, ಡಾ. ಸಿರಿಬೆಳ್ಳ ಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಉಪಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಪ್ರಮುಖರು ಪಾಲ್ಗೊಳ್ಳುವರು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಚಂದ್ರಭೂಪಾಲ್, ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net