ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿರಂತರ

Nayana motamma
ನಯನಾ ಮೋಟಮ್ಮ
Published on

ಮೂಡಿಗೆರೆ: ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿಯನ್ನು ಒಂದು ವರ್ಷದೊಳಗೆ ಜಾರಿಗೆ ತಂದಿದೆ. ಸರ್ಕಾರ ನೀಡುತ್ತಿರುವ 5 ಗ್ಯಾರಂಟಿ ಸೌಲಭ್ಯಗಳು ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ತಿಳಿಸಿದರು.

ಹೊಯ್ಸಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ತಾಲೂಕಿನಲ್ಲಿ ನಿವೇಶನ ರಹಿತರ ಸಮಸ್ಯೆ ನಿವಾರಿಸಲು ಕ್ಷೇತ್ರದ ಜನರೇ ಅಡ್ಡಿಯಾಗುತ್ತಿದ್ದಾರೆ. ಜನರ ಹಕ್ಕು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಅದಕ್ಕೆ ನಾನು ಬಿಡುವುದಿಲ್ಲ. ಇನ್ನು 6 ತಿಂಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುತ್ತೇನೆಂದು ಹೇಳಿದರು.
ಭ್ರೂಣ ಹತ್ಯೆಯಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಆದರೆ ತಾಲೂಕಿನಲ್ಲಿ ಮಹಿಳೆಯರ ಸಂಖ್ಯೆ ಅಧಿಕವಿರುವುದು ಸಂತಸ ತಂದಿದೆ. ಭ್ರೂಣ ಹತ್ಯೆಗೆ ಕಡಿವಾಣ ಹಾಕಲು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಆಯೋಜಿಸಿರುವ ಸಂವಿಧಾನ ಜಾಥಾ ಜ.30ರಿಂದ ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಇದಕ್ಕೆ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವೆ ಮೋಟಮ್ಮ, ಪಪಂ ಸದಸ್ಯರಾದ ಎಚ್.ಪಿ.ರಮೇಶ್, ಕೆ.ವೆಂಕಟೇಶ್, ಮನೋಜ್, ತಾಲೂಕು ಬೆಳೆಗಾರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಕರವೇ ಜಿಲ್ಲಾಧ್ಯಕ್ಷ ಪ್ರಸನ್ನ ದಾರದಹಳ್ಳಿ, ಕಸಾಪ ಅಧ್ಯಕ್ಷ ಶಾಂತಕುಮಾರ್, ತಾಪಂ ಇಒ ದಯಾವತಿ, ಪ್ರಭಾರ ಬಿಇಒ ಹೇಮಂತಚಂದ್ರ, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net