ಕೆಪಿಸಿಸಿ ಸದಸ್ಯ ಗುರುಚರಣ್‌ಗೆ ಬಿಜೆಪಿ, ಜೆಡಿಎಸ್ ಗಾಳ

Gurucharan(Cong)
Published on

ಮಂಡ್ಯ: ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಎಸ್.ಗುರುಚರಣ್ ಅವರಿಗೆ ಜೆಡಿಎಸ್ ಮತ್ತು ಬಿಜೆಪಿ ಗಾಳ ಹಾಕಿದೆ.

ಎಸ್.ಎಂ.ಕೃಷ್ಣ ಅವರ ಸಹೋದರನ ಮಗ ಗುರುಚರಣ್ ಪ್ರಬಲ ಆಕಾಂಕ್ಷಿಯಾಗಿದ್ದರು. ಅಂತಿಮ ಹಂತದಲ್ಲಿ ಕದಲೂರು ಉದಯ್‌ಗೆ ಟಿಕೆಟ್ ೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಗುರು ಬೇಸರಗೊಂಡಿದ್ದಾರೆ. ಮಾತ್ರವಲ್ಲದೆ ಬೆಂಬಲಿಗರು, ಹಿತೈಷಿಗಳ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ವೇಳೆ ಹಲವು ಸಲಹೆ ಕೇಳಿಬಂದಿದೆ.

ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಗುರುಚರಣ್ ಭೇಟಿ ಮಾಡಲಿದ್ದಾರೆ. ಬುಧವಾರ(ಏ.19) ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಗುರುವಾರ(ಏ.20) ಜೆಡಿಎಸ್ ನಾಯಕರು ಅವರೊಂದಿಗೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net