

ರಾವಂದೂರು: ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ ಯಾವುದಾದರೂ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕು ಸುಂಡವಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚನೆ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದರೆ ಜನರಿಗೆ ನೀಡುವ ಭರವಸೆಗಳನ್ನು ಖಂಡಿತ ಈಡೇರಿಸುತ್ತದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಗ್ಯಾರಂಟಿ ಕಾರ್ಡ್‌ಗಳನ್ನು ಮತದಾರರಿಗೆ ವಿತರಿಸಲಾಗಿದೆ. ಹತ್ತು ರ್ಷಗಳಿಂದ ಜನ ಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ರೈತರು, ಬಡವರು ಸಂಕಷ್ಟದಿಂದ ಹೊರ ಬರಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಕೋರಿದರು.
ಮುಖಂಡರಾದ ಮಹದೇವ್, ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.