ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಬಹುಮತ

NS Bosaraju
Published on

ರಾಯಚೂರು: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಕಾರಕ್ಕೆ ಬರಲಿದ್ದು, ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ಎದುರಾಗುವುದಿಲ್ಲ. ಕಾಂಗ್ರೆಸ್ 65 ಸ್ಥಾನಗಳನ್ನು ಗೆಲ್ಲುವ ಮೂಲಕ ಅಕಾರಕ್ಕೆ ಬರಲಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಹಾಗೂ ತೆಲಂಗಾಣ ಚುನಾವಣೆ ವೀಕ್ಷಕ ಎನ್.ಎಸ್.ಬೋಸರಾಜು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ನಾವು ಯಾವುದೇ ಆಪರೇಷನ್ ಮಾಡುವುದಿಲ್ಲ. ನಮಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಪೂರ್ಣ ಬಹುಮತ ಬರುವ ನಿರೀಕ್ಷೆಯಿದೆ ಎಂದರು.
ತೆಲಂಗಾಣ ಚುನಾವಣೆ ಲಿತಾಂಶ ಭಾನುವಾರ ಪ್ರಕಟವಾಗಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ನನಗೆ ಹೈಕಮಾಂಡ್ ಉಸ್ತುವಾರಿ ನೀಡಿದೆ. ನಾವು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ಬುಕ್ ಮಾಡಿಲ್ಲ. ಲಿತಾಂಶದ ನಂತರ ಎಲ್ಲ ಶಾಸಕರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ.
ಛತ್ತೀಸ್‌ಗಡ್, ರಾಜಸ್ತಾನ್, ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಅಕಾರಕ್ಕೆ ಬರಲಿದೆ. ಪ್ರಧಾನಿ ಮೋದಿ ಪ್ರಚಾರದಿಂದ ಯಾವುದೇ ಮ್ಯಾಜಿಕ್ ಆಗುವುದಿಲ್ಲ. ತೆಲಂಗಾಣದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ಪಡೆಯಲಿದೆ ಎಂದು ಎನ್.ಎಸ್.ಬೋಸರಾಜು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net