ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿಯೇ ಇಲ್ಲ

4hos1p bjp halappa
ಹೊಸನಗರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಹರತಾಳು ಹಾಲಪ್ಪ ಮತಯಾಚಿಸಿದರು. ಸುಬ್ರಹ್ಮಣ್ಯ, ದೇವಾನಂದ್, ಗಣಪತಿ ಬೆಳಗೋಡು ಇತರರಿದ್ದರು.
Published on

ಹೊಸನಗರ: ಕಾಂಗ್ರೆಸ್‌ನಲ್ಲಿ ನಾಯಕತ್ವ ಕೊರತೆ ಎದ್ದು ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳದೆ ಪಕ್ಷವನ್ನು ಗೆಲ್ಲಿಸುವಂತೆ ಪ್ರಚಾರ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಲೇವಡಿ ಮಾಡಿದರು.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಶನಿವಾರ ಪಟ್ಟಣದಲ್ಲಿ ಮತಯಾಚನೆ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿಶ್ವವೇ ಮೆಚ್ಚಿದ ನಾಯಕ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ. ಇಡೀ ವಿಶ್ವವೇ ಅವರನ್ನು ಒಪ್ಪಿದೆ. ಮತ್ತೊಮ್ಮೆ ಅವರು ಪ್ರಧಾನಿ ಆಗಬೇಕೆಂಬುದು ಜನರ ಹಂಬಲ. ದೇಶವನ್ನು ಹಿಂದೆಂದೂ ಕಾಣದಂತೆ ಅಭಿವೃದ್ಧಿಪಥದಲ್ಲಿ ಕೊಂಡೊಯ್ದ ಮೋದಿ ಅವರನ್ನು ಮತ್ತೊಮ್ಮೆ ಬೆಂಬಲಿಸುವ ಕೆಲಸ ಈ ಬಾರಿ ಆಗಲಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ನಮ್ಮ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಈ ಬಾರಿಯೂ ಗೆಲುವು ಸಾಧಿಸಲಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರಿಗೆ ಶ್ರೀರಕ್ಷೆ. ಕ್ಷೇತ್ರದಲ್ಲಿ ಕಾರ್ಯಕರ್ತರ ನಿರಂತರ ಶ್ರಮ ಈ ಬಾರಿ ಅವರ ಗೆಲುವಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಣದೆ ಜನ ಈಗಾಗಲೇ ಬೇಸತ್ತಿದ್ದಾರೆ. ಇದರ ಲಾಭ ಬಿಜೆಪಿಗೆ ಸಿಗಲಿದೆ ಎಂದು ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಹ್ಮಣ್ಯ, ಪ್ರಮುಖರಾದ ದೇವಾನಂದ್, ಗಣಪತಿ ಬೆಳಗೋಡು, ಉಮೇಶ್ ಕಂಚುಗಾರ್, ಶ್ರೀಪತಿ ರಾವ್, ಮೋಹನ್ ಮಂಡಾನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net