

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಶಾಸಕರು ಮಾತನಾಡಿಲ್ಲ. ಹೈಕಮಾಂಡ್ ಸೇರಿ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಿಎಂ ಜೊತೆಗೆ ಇದ್ದಾರೆ. ಪ್ರಾಸಿಕ್ಯೂಷನ್ ವಿಚಾರಣೆ ಪರಿಣಾಮ ಬೀರುವುದಿಲ್ಲ. ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಅವರು 8 ಬಾರಿ ಶಾಸಕರಾದವರು. ಮೈಸೂರಿನಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ `ಸಿದ್ದರಾಮಯ್ಯ ಹೇಳಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ' ಎಂದಿದ್ದಾರೆ. ಈ ಹೇಳಿಕೆಯನ್ನು ಬೇರೆ ಆಯಾಮಗಳಲ್ಲಿ ವಿಶ್ಲೇಷಿಸುವುದು ಸರಿಯಲ್ಲ ಎಂದರು.