ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ಖಂಡನೆ, ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

CONGRESS PROTEST BELE ERIKE
ವಿಜಯಪುರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಹಿರಿಯ ನ್ಯಾಯವಾದಿ ಕೆ.ಎಫ್. ಅಂಕಲಗಿ, ಕನ್ನಾನ ಮುಶ್ರೀಫ್ ಮತ್ತಿತರರಿದ್ದಾರೆ.
Published on

ವಿಜಯಪುರ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಜನ ರೋಸಿ ಹೋಗಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಖೊಟ್ಟಿ ಆರೋಪ ಮಾಡಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದು ದ್ವೇಷ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದು ಕೇವಲ ಕಾನೂನು ಪ್ರಕ್ರಿಯೆಯ ವಿಷಯವಲ್ಲ; ಬದಲಿಗೆ ರಾಜಕೀಯ ಸೇಡು ಮತ್ತು ಬೆದರಿಕೆಯ ಪ್ರಕ್ರಿಯೆಯಾಗಿದೆ. ಮುಂಬರುವ ದಿನಗಳಲ್ಲಿ ಗುಜರಾತ ರಾಜ್ಯದಲ್ಲಿ ರಾಹುಲ್ ಗಾಂಧಿ ಜನಜಾಗೃತಿಗಾಗಿ ಹೋರಾಟ ಮಾಡಲಿದ್ದಾರೆಂಬ ಕಾರಣಕ್ಕೆ ಈ ಕುತಂತ್ರ ಹೆಣೆಯಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಗಳು ಸರಿ ಅಲ್ಲ. ತಕ್ಷಣ ಈ ಸೇಡಿನ ಕಾರ್ಯ ನಿಲ್ಲಿಸಬೇಕು ಎಂದರು.

ಹಿರಿಯ ನ್ಯಾಯವಾದಿ ಕೆ.ಎಫ್. ಅಂಕಲಗಿ ಮಾತನಾಡಿ, ಇದೊಂದು ರಾಜಕೀಯ ಪ್ರೇರಿತ, ಉದ್ದೇಶಪೂರ್ವಕ ಕೃತ್ಯವಾಗಿದೆ. ವಿರೋಧ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ನಾವು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇವೆ ಎಂದರು.

ವಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ವಿದ್ಯಾವತಿ ಅಂಕಲಗಿ, ಮುಖಂಡರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಆಜಾದ ಪಟೇಲ, ಸುಭಾಷ ಕಾಲೇಬಾಗ, ಗಂಗಾಧರ ಸಂಬಣ್ಣಿ, ವಿಜಯಕುಮಾರ ಘಾಟಗೆ, ಆ್ತಾಬ ಕಾದ್ರಿ ಇನಾಮದಾರ, ಜಮೀರ ಬಕ್ಷಿ, ಶಾಹಜಾನ ಮುಲ್ಲಾ, ಗುರು ತಾರನಾಳ, ಸುರೇಶ ಹಾರಿವಾಳ, ಬಾಲನಗೌಡ ಪಾಟೀಲ, ಈರನಗೌಡ ಬಿರಾದಾರ, ಆರತಿ ಶಹಾಪುರ, ಡಿ.ಎಚ್. ಕಲಾಲ, ಆನಂದ ಜಾಧವ, ಜಾಕೀರಹುಸೇನ ಮುಲ್ಲಾ, ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವಾಣ್, ಇಲಿಯಾಸ ಸಿದ್ದಿಕಿ, ಶರಣಪ್ಪ ಯಕ್ಕುಂಡಿ, ಸಲೀಮ ಪೀರಜಾದೆ, ಮೊಯಿನ ಶೇಖ, ರಮೇಶ ಗುಬ್ಬೇವಾಡ, ಸಾಹೇಬಗೌಡ ಬಿರಾದಾರ, ವಿಜಯಕುಮಾರ ಕಾಳೆ, ರಾಜೇಶ್ವರಿ ಚೋಳಕೆ, ಫೈರೋಜ್ ಶೇಖ, ಚನ್ನಬಸಪ್ಪ ನಂದರಗಿ, ಬಿ.ಎಸ್. ಗಸ್ತಿ, ಕೃಷ್ಣಾ ಲಮಾಣಿ, ಸಿದ್ಧಾರ್ಥ ನಿಂಬಾಳಕರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net