ಇಂದಿರಾ ಗಾಂಧಿ ಆಡಳಿತ ವಿಶ್ವಕ್ಕೆ ಮಾದರಿ

udp-31-congress
Published on

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿದ್ದರು. ಅವರ ಆಡಳಿತ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್​ ಹೇಳಿದರು.

ಜಿಲ್ಲಾ ಕಾಂಗ್ರೆಸ್​ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್​ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಸರ್ದಾರ್​ ವಲ್ಲಭಭಾಯ್​ ಪಟೇಲ್​ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿರಾ ಗಾಂಧಿ ನಮಗೆಲ್ಲಾ ಆದರ್ಶ. ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ ಎಂದರು.

ಇಂದಿರಾಗಾಂಧಿ ನೇತೃತ್ವದಲ್ಲಿ ಭಾರತವು ಅಂತರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್​ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸತಿಕ ಸುಧಾರಣೆಗಳನ್ನು ತಂದಿದ್ದರು. ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ಭಾರತವನ್ನು ಮುನ್ನಡೆಸಿದ್ದರು. ತ್ಯಾಗ ಬಲಿದಾನಕ್ಕೆ ಹೆಸರಾದ ಮಹಿಳೆ ಎಂದು ಹೇಳಿದರು.

ಪಟೇಲ್​ ಅದರ್ಶ ಪುರುಷ

ರಾಜಾಡಳಿತದಲ್ಲಿ ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಕೀರ್ತಿ ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರಿಗೆ ಸಲ್ಲುತ್ತದೆ. ಅಖಂಡ ಭಾರತ ನಿಮಾರ್ಣದಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯೆ ಜ್ಯೋತಿ ಹೆಬ್ಬಾರ್​, ಮುಖಂಡರಾದ ಉದಯ್​ ಕುಮಾರ್​ ಶೆಟ್ಟಿ, ರಮೇಶ್​ ಕಾಂಚನ್​ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net