ಲೋಕಾದಾಳಿಗೆ ಕಾಂಗ್ರೆಸ್ ಒತ್ತಾಯ

thennira maina
Published on

ಮಡಿಕೇರಿ: ಬಿಜೆಪಿಯ ಸರ್ವ ಶಾಸಕರು ಮತ್ತು ಸಚಿವರ ಮನೆ ಹಾಗೂ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಯಲಿ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನರವರು ತನಿಖಾ ಸಂಸ್ಥೆಗಳನ್ನು ಒತ್ತಾಯಿಸಿದ್ದಾರೆ.


ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಶಾಸಕ ಮಾಡಾಳ್ ವಿರೂಕ್ಷಾಪರವರ ಮಗ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಪ್ರಶಾಂತ್‌ರವರು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವ ಸಂದರ್ಭ ಸಿಕ್ಕಿ ಬಿದ್ದಿದ್ದಾರೆ. ಜತೆಗೆ ದಾಳಿ ನಡೆದಾಗ ಅಕ್ರಮ ಹಣದ ಕಂತೆಗಳು ಸಿಕ್ಕಿವೆ. ಈ ಪ್ರಕರಣ ಬಿಜೆಪಿ ಸರ್ಕಾರದ ೪೦% ಕಮಿಷನ್ ಹಗರಣವನ್ನು ಸಾಕ್ಷೀಕರಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ಎಲ್ಲಾ ಶಾಸಕರು ಹಾಗೂ ಸಚಿವರ ಮನೆ, ಕಚೇರಿ, ಸಂಭಂದಿಕರು, ಅವಲಂಬಿತರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸೂಕ್ತವಾಗಿದೆ ಎಂದು ಒತ್ತಾಯಿಸಿದ್ದಾರೆ.


ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯ ಮಂತ್ರಿ ಬೊಮ್ಮಾಯಿಯವರು ಪ್ರತಿ ಬಾರಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಸಂಕಲ್ಪ ಮಾಡುತ್ತಿದ್ದಾರೆ. ಇದರ ಬದಲಿಗೆ ಮೊದಲು ಅವರು ಲಂಚ ಮುಕ್ತ ಬಿಜೆಪಿ ಮಾಡುತ್ತೇವೆ ಎಂದು ಸಂಕಲ್ಪ ಮಾಡಲಿ ಎಂದು ಮೈನಾ ಕುಟುಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net