

ವಿಜಯವಾಣಿ ಸುದ್ದಿಜಾಲ ಬೈಂದೂರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ. ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ವಾತನಾಡಿದರು. ನಿಕಟಪೂರ್ವಾಧ್ಯಕ್ಷ ಶೇಖರ ಪೂಜಾರಿ ಅವರು ನೂತನ ಅಧ್ಯಕ್ಷ ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಅಶೋಕ್ ಕೊಡವೂರು, ಮುಖಂಡರಾದ ಮುನಿಯಾಲು ಉದಯ್ ಕುವಾರ್ ಶೆಟ್ಟಿ, ಎಸ್.ರಾಜು ಪೂಜಾರಿ, ಕಿಶನ್ ಹೆಗ್ಡೆ, ರುರಾಮ ಶೆಟ್ಟಿ, ಅರವಿಂದ್ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ ಮೂವರಲ್ಲಿ ಇಬ್ಬರು ಈ ದೇಶಕ್ಕಾಗಿ ಪ್ರಾಣತ್ಯಾಗ ವಾಡಿದ್ದಾರೆ. ರಾಹುಲ್ ಗಾಂಧಿ ಮನಸ್ಸು ವಾಡಿದ್ದರೆ 2004ರಲ್ಲಿ ಅಧಿಕಾರ ಹಿಡಿಯಬಹುದಿತ್ತು. ಜವಾಹರಲಾಲ್ ನೆಹರು ಅವರು ಅಗರ್ಭ ಶ್ರೀಮಂತ ಮನೆತನದಲ್ಲಿ ಹುಟ್ಟಿದರೂ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ https://www.vijayavani.net/annual-meeting-of-sanjeevini-union-at-80-badagabettu-gram-panchayat-udupi https://www.vijayavani.net/s-v-english-medium-school-election