ಬರ ಪರಿಹಾರದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ

prahlad joshi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಶೇ. 10ರಿಂದ 11ರಷ್ಟು ಬರ ಪರಿಹಾರ ಹಣ ಬಿಡುಗಡೆಯಾಗಿದ್ದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ರಾಜ್ಯಕ್ಕೆ ಶೇ.51ರಷ್ಟು ಬರ ಪರಿಹಾರ ಹಣ ಕೊಟ್ಟಿದ್ದಾರೆ ಎಂದು ಹೇಳಿದರು.

2014ರಿಂದ 2023ರವರೆಗೆ ಮೋದಿ ಸರ್ಕಾರ ರಾಜ್ಯಕ್ಕೆ 30951 ಕೋಟಿ ರೂ. ಬರ ಪರಿಹಾರ ಕೊಟ್ಟಿದೆ. ಎನ್​ಡಿಆರ್​ಎಫ್​ಲ್ಲಿ 11482 ಕೋ. ರೂಪಾಯಿ ಬಿಡುಗಡೆ ಮಾಡಿದೆ. ಅದೇ ಯುಪಿಎ ಅವಧಿ 2009ರಿಂದ 2013ರವರೆಗೆ 15,541 ಕೋಟಿ ಕೊಟ್ಟಿದ್ದರು. ಒಟ್ಟು 44638 ಕೋಟಿ ಕೇಳಿದ್ದರೆ, ಎನ್​ಡಿಆರ್​ಎಫ್​ನಲ್ಲಿ 3500 ಕೋಟಿ ರೂ. ಬಿಡುಗಡೆ ಮಾಡಿದ್ದರು ಎಂದು ತಿಳಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್​ಗೆ ಹೋಗುವ ಅವಶ್ಯಕತೆಯಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಟಕ ಮಾಡುತ್ತಿದ್ದಾರೆ ಅಷ್ಟೇ ಎಂದು ಜೋಶಿ ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net