ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

PHOTO--3
Published on

ಚಿತ್ರದುರ್ಗ: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಎಐಸಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬಿಜೆಪಿ ವೈಫಲ್ಯವನ್ನು ದೇಶದ ಜನರ ಮುಂದಿಡಲಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭಾ ಮುಖ್ಯ ಸಚೇತಕ ಕೊಡಿಕುನ್ನಿಲ್ ಸುರೇಶ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮುಂದುವರೆದಿದ್ದು, ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿ ಆಡಳಿತ ವೈಖರಿ ವಿರುದ್ಧ ಜನರು ಕೂಡ ಬೇಸತ್ತಿದ್ದು, ಕಾಂಗ್ರೆಸ್ ಬೆಂಬಲಿಸುವುದು ಖಚಿತ ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ಪಕ್ಷಕ್ಕೆ ಬಹುದೊಡ್ಡ ಶಕ್ತಿ ಬಂದಿದೆ. ಗ್ರಾಮೀಣ ಭಾಗಗಳಲ್ಲೂ ಸಂಚರಿಸಿ ಜನರ ಸಮಸ್ಯೆ ಆಲಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ, ಜನಪರ ಯೋಜನೆಗಳ ಜಾರಿಗೊಳಿಸಿ, ಜನರ ಬದುಕು ಉತ್ತಮವಾಗಲಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎ.ಸೇತೂರಾಂ, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‌ಕುಮಾರ್, ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೇರ್ಲಿಗೆ, ಸುಬ್ಬಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net